ಸಾರ್ವಜನಿಕ ಸಂಪರ್ಕ ಇಲಾಖೆ ಪುನರ್ ರಚನೆ ಸಮಿತಿ ಶಿಫಾರಸು ಮಾಡಿದೆ.
Advertisement
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಮಿತಿ ಅಧ್ಯಕ್ಷ ಎಂ.ಆರ್.ಶ್ರೀನಿವಾಸ ಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರಿಗೆ 120 ಪುಟಗಳ ವರದಿ ಸಲ್ಲಿಸಿದರು. ರಾಜ್ಯ ಸರ್ಕಾರದ ಪ್ರತಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಜಿಲ್ಲಾವಾರು ಕಚೇರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅರಿವು ಮೂಡಿಸುವ ಕೆಲಸ ಮಾಡುವುದು, ಮುದ್ರಣ ಮಾಧ್ಯಮದ ಜತೆಗೆ ದೂರದರ್ಶನ ವಾಹಿನಿ ಹಾಗೂ ಸಾಮಾಜಿಕ ಜಾಲತಾಣಗಳಿಗೂ ಸರ್ಕಾರದ
ಕಾರ್ಯಕ್ರಮಗಳ ಮಾಹಿತಿ ರವಾನೆ ಮಾಡುವುದು ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ “ಪ್ರಚಾರ’ ರಾಯಭಾರಿಯಾಗಿ ಕಾರ್ಯನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಇಲಾಖೆಯಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಬೇಕು. ದೆಹಲಿಯಲ್ಲಿ ರಾಜ್ಯದ ಪತ್ರಕರ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕರ್ನಾಟಕ ಮಾಧ್ಯಮ ಕೇಂದ್ರ ಸ್ಥಾಪಿಸಲು ಸಮಿತಿ ಶಿಫಾರಸು ಮಾಡಿದೆ.
ಪ್ರಸ್ತುತ ಅತ್ಯುತ್ತಮವಾಗಿ ಕಾರ್ಯನಿರ್ವ ಹಿಸುತ್ತಿದ್ದು, ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹಾಗೂ ಸರ್ಕಾರದ ಯೋಜನೆಗಳ ವಿವರ ಜನರಿಗೆ ಮನದಟ್ಟು ಮಾಡಲು ಅಗತ್ಯ ಇರುವ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ವಾರ್ತಾ ಇಲಾಖೆಯ ಅನುದಾನ ಕಡಿಮೆ. ಇಲಾಖೆಗೆ ಹೆಚ್ಚಿನ ಅನುದಾನದ ಅಗತ್ಯ ಕುರಿತು ಪ್ರಸ್ತಾವನೆ ಸಲ್ಲಿಸಿದ್ದರೆ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು. ಸಮಿತಿ ಅಧ್ಯಕ್ಷ ಎಂ.ಆರ್.ಶ್ರೀನಿವಾಸ ಮೂರ್ತಿ, ಲಭ್ಯ ಇರುವ ಮಾನವ ಸಂಪನ್ಮೂಲದಲ್ಲಿ ಇಂದಿನ ತಾಂತ್ರಿಕತೆ ಬಳಸಿ
ಕೊಂಡು ಅತ್ಯಂತ ಪರಿಣಾಮಕಾರಿಯಾಗಿ ಇಲಾಖೆ ಕಾರ್ಯನಿರ್ವಹಿಸುವ ಬಗ್ಗೆ ಸಲಹೆ ಮತ್ತು ಶಿಫಾರಸು ಮಾಡಲಾಗಿದೆ
ಎಂದು ಹೇಳಿದರು. ಸಮಿತಿ ಸದಸ್ಯರಾದ ಡಾ.ಎಸ್.ಕೃಷ್ಣಮೂರ್ತಿ, ಹಿರಿಯ ಪತ್ರಕರ್ತ ರಾಜಾ ಶೈಲೇಶ್‌ಚಂದ್ರಗುಪ್ತ, ಇಸ್ಮಾಯಿಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್, ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್, ಎ.ಆರ್.ಪ್ರಕಾಶ್ ಉಪಸ್ಥಿತರಿದ್ದರು.