Advertisement

ಅತ್ಯಾಚಾರ ಪ್ರಕರಣದಲ್ಲಿ 17 ವರ್ಷದ ಬಾಲಕನ ಬಂಧನ, ಬಾಲಕಿ ಕೊಲೆ..!

05:34 PM Jun 05, 2022 | Team Udayavani |

ಜೈಪುರ  : ನಗರದ ಅಮೇರ್ ಪ್ರದೇಶದಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಹಿಂಸಿಸಿ ಕೊಲೆ ಮಾಡಿದ್ದಕ್ಕಾಗಿ ಜಮೀನುದಾರನೋರ್ವನ 17 ವರ್ಷದ ಮಗನನ್ನು ಜೈಪುರ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಗಳು ಕೊಲೆ ಮಾಡುವ ಮೊದಲು ಬಾಲಕಿಯ ಮೇಲೆ ಅತ್ಯಾಚಾರವೆಸಗಿರಬಹುದು ಎಂದು ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ. 9 ವರ್ಷದ ಬಾಲಕಿ ನಾಪತ್ತೆಯಾದ ಬಳಿಕ ಜೂನ್ 4ರ ಶನಿವಾರದಂದು ಈ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಕಿಯನ್ನು ಹುಡುಕಲು ತೀವ್ರ ಹುಡುಕಾಟ ಪ್ರಾರಂಭವಾಯಿತು. ಇದಾದ ಕೆಲವೇ ದಿನಗಳಲ್ಲಿ ಬಾಲಕಿಯ ಶವ ಆಕೆಯ ಮನೆಯಿಂದ ಕೆಲವು ಮೀಟರ್ ದೂರದಲ್ಲಿ ಶಿಥಿಲಗೊಂಡ ಕಟ್ಟಡದಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ಜಮೀನುದಾರನ 17 ವರ್ಷದ ಮಗ ನಾಪತ್ತೆಯಾಗಿದ್ದು, ಪೊಲೀಸರು, ಶೋಧ ಕಾರ್ಯಾಚರಣೆಯ  ಮೂಲಕ ಆತನಿರುವ ಲೊಕೇಶನ್ ಪತ್ತೆಹಚ್ಚಲಾಗಿದೆ. ಬಳಿಕ ಆರೋಪಿಗಳನ್ನು ಪೊಲೀಸರು ಬಮದಿಸಿದ್ದು, ವಿಚಾರಣೆ ವೇಳೆ ಆರೋಪಿಗಳು ಬಾಲಕಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಂದೆ ತನ್ನ ದೂರಿನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದರು.

Advertisement

ಈ ಸಂಬಂಧ ಪೊಲೀಸರು ಸೆಕ್ಷನ್ 302, 375 ಮತ್ತು ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next