Advertisement

Newsclick: ಡಿ.1ರ ವರೆಗೆ ಪ್ರಬಿರ್‌ ಪುರಕಾಯಸ್ಥ ನ್ಯಾಯಾಂಗ ವಶಕ್ಕೆ

08:31 PM Nov 02, 2023 | Team Udayavani |

ನವದೆಹಲಿ: ಕಾನುನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ)ಯಡಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬಿರ್‌ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್‌ ಚಕ್ರವರ್ತಿ ಅವರನ್ನು ಡಿ.1ರವರೆಗೆ ನವದೆಹಲಿಯ ಸ್ಥಳೀಯ ಕೋರ್ಟ್‌ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.

Advertisement

ಚೀನಾ ಪರ ಪ್ರಚಾರ ಮಾಡಲು ನ್ಯೂಸ್‌ಕ್ಲಿಕ್‌ ಹಣ ಪಡೆದ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಉಗ್ರ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೆಹಲಿ ಪೊಲೀಸರ ವಿಶೇಷ ವಿಭಾಗ ಅ.3ರಂದು ಇಬ್ಬರನ್ನು ಬಂಧಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next