ಪಣಜಿ : ಫೆಬ್ರವರಿ 2022 ರಲ್ಲಿ ನಡೆಯುವ ಗೋವಾ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವ ಬಗ್ಗೆ ಪಕ್ಷದ ಸಂಸದೀಯ ಮಂಡಳಿ ನಿರ್ಧರಿಸಲಿದೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ.ರವಿ ಹೇಳಿದ್ದಾರೆ.
ಇದನ್ನೂ ಓದಿ : ಕೋವಿಡ್ : ರಾಜ್ಯದಲ್ಲಿಂದು 14337 ಸೋಂಕಿತರು ಗುಣಮುಖ; 2984 ಹೊಸ ಪ್ರಕರಣ ಪತ್ತೆ
ಮಾಪ್ಸಾದಲ್ಲಿ ಇಂದು (ಶುಕ್ರವಾರ, ಜುಲೈ 2) ನಡೆದ ಬಿಜೆಪಿ ಬೈಠಕ್ ನಲ್ಲಿ ಮಾತನಾಡಿದ ಅವರು, ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಸಂಸದೀಯ ಮಂಡಳಿ ನಿರ್ಧರಿಸುತ್ತದೆ. ಟಿಕೇಟ್ ನೀಡುವಾಗ ಮಂಡಳಿಯು ಗೆಲವುನ ಸಾಮಥ್ರ್ಯದ ಮಾನದಂಡಗಳನ್ನು ಪರಿಗಣಿಸುತ್ತದೆ. ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಅವರು ಪಕ್ಷವು ಬಹುಮತ ಗಳಿಸುವ ಭರವಸೆಯಿಂದಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಬಿಜೆಪಿಗೆ ಜನ ಆಶೀರ್ವದಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
2022 ರ ವಿಧಾನಸಭಾ ಚುನಾವಣೆಯಲ್ಲಿ ಗೋವಾದ ಜನತೆ ಬಿಜೆಪಿಯನ್ನು ಆಶೀರ್ವದಿಸಲಿದ್ದು ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ರವಿ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ದಾಮು ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಜತೆ ಕಾರ್ಯನಿರ್ವಹಿಸಿದ್ದ ಕನ್ನಡದ ವಿಜ್ಞಾನಿ ಇನ್ನಿಲ್ಲ