Advertisement

ಮುಂಬರುವ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ಓಟ ಮುನ್ನಡೆಯಲಿದೆ : ಅರುಣ್ ಸಿಂಗ್

06:07 PM Jan 13, 2021 | Team Udayavani |

ಬೆಂಗಳೂರು : ಗ್ರಾಮ ಪಂಚಾಯತ್‍ಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಗೆಲುವಿನ ಪ್ರಮಾಣ ಕುಸಿದಿದೆ, ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ನಡೆದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವಿಗೆ ದೇಶದ ಅಭಿವೃದ್ಧಿಯ ನೇತೃತ್ವ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯುತ್ತಮ ಕಾರ್ಯಕ್ರಮಗಳು ಮತ್ತು ಸರ್ವರನ್ನು ಜೊತೆಗೊಯ್ಯುವ ಮಹತ್ವದ ಕಾರ್ಯ ಮಾಡುತ್ತಿರುವ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತವೇ ಕಾರಣ ಎಂದು ಎಂದು ಹೇಳಿದರು.

ಇದನ್ನೂ ಓದಿ:ಬರೋಬ್ಬರಿ ಏಳು ಕೆಜಿ ತೂಕದ ಗೆಣಸು ಬೆಳೆದ ರೈತ

ಭಾರತೀಯ ಜನತಾ ಪಕ್ಷವು ಜನರ ಸೇವೆಗೆ ಬದ್ಧವಾದ ಪಕ್ಷ. ಇತರ ಪಕ್ಷಗಳಂತಲ್ಲ. “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಧ್ಯೇಯವಾಕ್ಯದೊಂದಿಗೆ ಅದು ಕಾರ್ಯ ನಿರ್ವಹಿಸುತ್ತದೆ. ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಜನಪ್ರಿಯ ಮತ್ತು ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು ಗ್ರಾಮ ಪಂಚಾಯತ್‍ಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಅದರ ಸದುಪಯೋಗ ಆಗಬೇಕು; ದುರುಪಯೋಗ ಆಗದಿರಲಿ. ಯುವಕರು ಮತ್ತು ಮಹಿಳೆಯರು ಮೋರ್ಚಾಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.

Advertisement

ಇದನ್ನೂ ಓದಿ:ಜನವರಿ 14 ರಂದು ಸಚಿವ ಶ್ರೀಪಾದ ನಾಯಕ್ ಪತ್ನಿಯ ಅಂತ್ಯಕ್ರೀಯೆ

ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇತ್ತೀಚೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಮುಂದಿನ ಚುನಾವಣೆಗಳಲ್ಲೂ ನಾವು ಅಭೂತಪೂರ್ವ ಗೆಲುವು ಸಾಧಿಸಬೇಕು. ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆ ನಮ್ಮದಾಗಲಿ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next