Advertisement

ಮುಂದಿನ ತಿಂಗಳು ಸಿಎಂ ಗ್ರಾಮವಾಸ್ತವ್ಯ, ಗ್ರಾಮದ ಅಭಿವೃದ್ದಿಗೆ 1.5ಕೋಟಿ ರೂ. ಅನುದಾನ: ಖರ್ಗೆ

09:48 AM Jun 24, 2019 | Team Udayavani |

ಕಲಬುರಗಿ: ಮಳೆಯಿಂದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದೆ. ಹೀಗಾಗಿ ಯಾರು ನಿರಾಶರಾಗಬೇಡಿ. ಮುಂದಿನ ತಿಂಗಳು ಸಿಎಂರನ್ನು ಗ್ರಾಮಕ್ಕೆ ಕರೆಸುವೆ ಎಂದು ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

Advertisement

ಶನಿವಾರ ಸಿಎಂ ಜನತಾ ದರ್ಶನ ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳ ವೀಕ್ಷಿಸಿದ ನಂತರ

ಗ್ರಾಮಸ್ಥರನ್ನು ಕುರಿತು ಇಲ್ಲಿನ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಮಳೆಯಿಂದಾಗಿ ಕಾರ್ಯಕ್ರಮ ಮುಂದೂಡಿರೂವುದು ನಿರಾಸೆ ತಂದಿರಬಹುದು. ಆದರೆ ಮಳೆಯಿಂದ ರೈತರಿಗೆ ತುಂಬಾ ಅನುಕೂಲವಾಗಲಿದೆ. ಮುಂದೊಂದು ದಿನ ಸಿಎಂ ಅವರನ್ನು ಇಲ್ಲಿಗೆ ಕರೆಸಲಾಗುವುದು ಎಂದು ಜನರ ಬೇಡಿಕೆಯ ಮಧ್ಯೆ ಭರವಸೆ ನೀಡಿದರು.

ಗ್ರಾಮದ ಅಭಿವೃದ್ದಿಗಾಗಿ‌ ಸಮಾಜಕಲ್ಯಾಣ ಇಲಾಖೆಯ ವತಿಯಿಂದ ರೂ 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಗ್ರಾಮದಲ್ಲಿ ಹಾಗೂ ಅಫಜಲಪುರ ಮತಕ್ಷೇತ್ರದ ಅಭಿವೃದ್ದಿಗಾಗಿ ಪಟ್ಟಿಯನ್ನು ಸಿದ್ದಪಡಿಸಿದ್ದು ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಸಿಎಂ ಅವರಿಗೆ ಮನವಿ ಮಾಡಲಾಗುವುದು ಎಂದರು.

ರೈತರ ಕೈಯಲ್ಲಿದ್ದ ಅರ್ಜಿಗಳನ್ನು ಗಮನಿಸಿದ ಸಚಿವರು ಇಂದಿನ ಸಿಎಂ ಗ್ರಾಮ ವಾಸ್ತವ್ಯ ಮುಂದೂಡಲಾಗಿದೆ ಆದರೂ ಸಾರ್ವಜನಿಕರು ತಂದಿರುವ ಸಮಸ್ಯೆಗಳ ಕುರಿತ ಅರ್ಜಿಗಳನ್ನು ಸ್ವೀಕರಿಸುವಂತೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ತಾಪಂ ಇಓ ಅವರಿಗೆ ಸೂಚನೆ ನೀಡಿದರು.

Advertisement

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಎಂ ವೈ ಪಾಟೀಲ್, ಹೇರೂರು ಗ್ರಾಮದ ಮೂಲಭೂತ ಸೌಲಭ್ಯ ಒದಗಿಸಲು 50 ಲಕ್ಷ ರೂ. ಜೊತೆಗೆ ಸಮುದಾಯ ಭವನ ನಿರ್ಮಾಣಕ್ಕೆ ರೂ 2 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ ಖರ್ಗೆಗೆ ಮನವಿ ಮಾಡಿದ್ದರು

Advertisement

Udayavani is now on Telegram. Click here to join our channel and stay updated with the latest news.

Next