Advertisement

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

11:08 AM Oct 16, 2021 | Team Udayavani |

ಮೈಸೂರು : ಈ‌ ಬಾರಿಯ ದಸರಾ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಮುಂದಿನ‌ ವರ್ಷ ಅದ್ದೂರಿಯಾಗಿ ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

Advertisement

ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ,ದಸರಾ ಯಶಸ್ಸಿಗೆ ಸಹಕರಿಸಿದ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದರು.

ದಸರಾ ಸಂಧರ್ಭದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೆಹಣ ನೀಡುತ್ತೇವೆ. ದಸರಾ ವಸ್ತು ಪ್ರದರ್ಶನವನ್ನು 365 ದಿನ ಬಳಕೆ ಮಾಡಲು ಚಿಂತನೆ ನಡೆಸಿದ್ದು,ಆ ಬಗ್ಗೆ ಎಲ್ಲರ ಜೊತೆ ಕುಳಿತು ಮಾತುಕತೆ ನಡೆಸುತ್ತೇನೆ ಎಂದರು.

ನಾಳೆಯಿಂದ ನಾಲ್ಕು‌ ದಿನಗಳ‌ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತಿದ್ದು, ಎರಡು‌ ದಿನ ಹಾನಗಲ್, ಎರಡು ದಿನ‌ ಸಿಂದಗಿಯಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದರು.

ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುತ್ತಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next