Advertisement

ಮುಂದಿನ ವರ್ಷ ಲೋಕಾರ್ಪಣೆ: ಡಾ|ಅಶ್ವತ್ಥ ನಾರಾಯಣ್‌

09:27 PM Sep 25, 2021 | Team Udayavani |

ಕಾಪು: ಬೆಳಪುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ವಿಜ್ಞಾನ ಸಂಶೋಧನ ಕೇಂದ್ರ , ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಮಗಾರಿ ಪೂರ್ಣಗೊಳಿಸಿ, 2022 ಮಾರ್ಚ್‌ನಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ್‌ ಸಿ. ಎನ್‌. ಹೇಳಿದರು.

Advertisement

ಬೆಳಪುವಿನ 20 ಎಕರೆ ಜಮೀನಿನಲ್ಲಿ ನಿರ್ಮಾಣ ಹಂತದಲ್ಲಿರುವ ಅತ್ಯಾಧುನಿಕ ವಿಜ್ಞಾನ ಸಂಶೋಧನ ಮತ್ತು ಸ್ನಾತಕೋತ್ತರ ಕೇಂದ್ರದ ಕಾಮಗಾರಿ ವೀಕ್ಷಿಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕೇಂದ್ರ, ರಾಜ್ಯ ಸರಕಾರ, ಮಂಗಳೂರು ವಿಶ್ವವಿದ್ಯಾನಿಲಯದ 50: 50ರ ಅನುಪಾತದ ಅನುದಾನದೊಂದಿಗೆ ಅತ್ಯಾಧುನಿಕ ವಿಜ್ಞಾನ ಸಂಶೋಧನ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ನಿರ್ಮಾಣವಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇಲ್ಲಿ ಎಲ್ಲ ಶೈಕ್ಷಣಿಕ ಚಟುವಟಿಕೆಗಳು ಕಾರ್ಯಾರಂಭಗೊಳ್ಳಲಿವೆ ಎಂದರು.

ಮಕ್ಕಳಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ನೂತನ ಶಿಕ್ಷಣ ನೀತಿಯಡಿ ಚಟುವಟಿಕೆ ಆರಂಭಿಸಲಾಗುತ್ತದೆ. ಆರಂಭದಲ್ಲಿ ವಿಜ್ಞಾನ, ಪದವಿ, ಸ್ನಾತಕೋತ್ತರ ತರಗತಿ ಆರಂಭಿಸಲಾಗುತ್ತದೆ. ಜತೆಗೆ ವಿಜ್ಞಾನ ಕೇಂದ್ರವೂ ಆರಂಭವಾಗಲಿದೆ ಎಂದರು.

ಇದನ್ನೂ ಓದಿ:ಕರ ಸೇವಕಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Advertisement

ಪ್ರಥಮ ಹಂತದಲ್ಲಿ ಸುಮಾರು 50 ಕೋ.ರೂ. ವೆಚ್ಚದಲ್ಲಿ 8 ಬ್ಲಾಕ್‌ಗಳ ಕಟ್ಟಡ ನಿರ್ಮಾಣಗೊಳ್ಳಲಿದ್ದು ಮೂಲ ಸೌಕರ್ಯಗಳ ಜೋಡಣೆ ಯಾಗಲಿದೆ. ಕೇಂದ್ರ ತ್ವರಿತಗತಿಯಲ್ಲಿ ಕಾರ್ಯರೂಪಗೊಳಿಸಲು ಶಾಸಕ ಲಾಲಾಜಿ ಮೆಂಡನ್‌ ಅವರು ನಿರಂತರ ಪ್ರಯತ್ನಶೀಲರಾಗಿದ್ದಾರೆ ಎಂದರು.

ಕಾಪು ಶಾಸಕ ಲಾಲಾಜಿ ಮೆಂಡನ್‌, ಕರ್ನಾಟಕ ಗೃಹ ಮಂಡಳಿಯ ಎಇಇ ಸಹನಾ, ಕಾಮಗಾರಿಯ ಗುತ್ತಿಗೆದಾರ ಕೆ. ವಾಸುದೇವ ಶೆಟ್ಟಿ, ಉದ್ಯಮಿ ಗುರ್ಮೆ ಸುರೇಶ್‌ ಶೆಟ್ಟಿ, ಕಾಪು ತಾ.ಪಂ. ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಸುಮಾ ಶೆಟ್ಟಿ, ನವೀನ್‌ ಅಮೀನ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next