Advertisement

ಸರಕಾರೇತರ ಸಂಸ್ಥೆ ,ಸಂತ್ರಸ್ತರೊಂದಿಗೆ ಜಿಲ್ಲಾಧಿಕಾರಿ ಚರ್ಚೆ

12:40 AM Nov 08, 2019 | Sriram |

ಮಡಿಕೇರಿ : ಪ್ರಕೃತಿ ವಿಕೋಪದಿಂದ ಕೊಡಗಿನಲ್ಲಿ ಉಂಟಾದ ಹಾನಿ ಮತ್ತು ಪುನರ್‌ ನಿರ್ಮಾಣದ ಧ್ಯೇಯದೊಂದಿಗೆ ಸ್ಥಿತಿ ಸ್ಥಾಪಕ ಸಮುದಾಯವನ್ನು ನಿರ್ಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಸರ್ಕಾರೇತರ ಸಂಸ್ಥೆಗಳು ಉದಾರ ದಾನಿಗಳು ಹಾಗೂ ಇತರ ಪಾಲುದಾರರನ್ನು ಒಳಗೊಂಡ ಸಮಿತಿ ಸಭೆಯು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಭೆ ನಡೆಯಿತು.

Advertisement

ಪ್ರವಾಹ ಪೀಡಿತ ಗ್ರಾಮಗಳು, ನೆರೆ ಸಂತ್ರಸ್ತರಿಗೆ ಪರಿಹಾರ, ಪುನರ್‌ ವಸತಿ ಮತ್ತು ಚೇತರಿಕೆ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾನಿಗೊಳಗಾದ ಕಟ್ಟಡಗಳ ದುರಸ್ತಿ, ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಂಡು ಉತ್ತಮ ಆರೋಗ್ಯ ಸೌಲಭ್ಯ ದೊರಕಿಸಿಕೊಡುವುದು. ಈಗಾಗಲೇ ಜಿಲ್ಲೆಯ 14 ಸಾವಿರ ರೈತರಿಗೆ ಬೆಳೆ ಪರಿಹಾರ ಬಾಬ್ತು 57 ಕೋಟಿ ಪರಿಹಾರ ತಲುಪಿರುವುದಾಗಿ ಸಭೆಯಲ್ಲಿ ತಿಳಿಸಿದರು. ಎಲ್ಲರನ್ನು ಒಳಗೊಂಡು ಮೂಲ ಸೌಕರ್ಯ, ಬೆಳೆ ನಷ್ಟ ಪರಿಹಾರ, ವೈಜ್ಞಾನಿಕ ಕ್ರಮಗಳಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಿಕೆ, ಸ್ವಯಂ ಉದ್ಯೋಗಕ್ಕೆ ತರಬೇತಿ ಹೀಗೆ ಹಲವು ಆಯಾಮಗಳಲ್ಲಿ ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಂ.ಬಿ.ದೇವಯ್ಯ ರೋಟರಿ ಅಧ್ಯಕ್ಷ‌ ರತನ್‌ ತಮ್ಮಯ್ಯ ಕೊಡಗು ಸೇವಾ ಕೇಂದ್ರದ ಪ್ರಮೋದ್‌ ತುಮೊRàಸ್‌ ಸಂಸ್ಥೆಯ ಪ್ರತಿನಿಧಿ ವಿಶ್ವನಾಥ, ರೈತ‌ ಕಾಳಪ್ಪ ಶಾಂತೆಯಂಡ ರವಿಕುಶಾಲಪ್ಪ ಮೊದಲಾದವರು ಸಲಹೆ ಸೂಚನೆಗಳನ್ನು ನೀಡಿ ದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಸ್ನೇಹಾ ಅವರು ಸಭೆಯ ಉದ್ದೇಶದ ಬಗ್ಗೆ ತಿಳಿಸಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸುಮನ್‌ ಡಿ.ಪಿ., ಯುನಿಸೆಫ್ ಪ್ರತಿನಿಧಿ ಮನೋಹರ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

ಅಹವಾಲು ಆಲಿಕೆ
ಸಭೆಯ ಕೊನೆಯಲ್ಲಿ ಅಹವಾಲು ಗಳನ್ನು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಇಂದಿನ ಸಭೆಯಿಂದ ಉತ್ತಮ ಮಾಹಿತಿಗಳನ್ನು ಎಲ್ಲರೂ ಹಂಚಿಕೊಂಡಿದ್ದಾರೆ. ಯುನೆಸೆಫ್ ಪ್ರತಿನಿಧಿಗಳು, ಸರಕಾರೇತರ ಸಂಸ್ಥೆಗಳು, ನೀಡುವಂತಹ ಸಹಕಾರವನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಪುನರ್‌ ವಸತಿ ಕಾರ್ಯದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಎಲ್ಲರ ಸಹಕಾರ ಅಗತ್ಯವಿದೆ ಎಂದರು. ಸರಕಾರ ಈಗಾಗಲೇ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ ಮಾಡಿಕೊಡುತ್ತಿದ್ದು, ಇದಕ್ಕೆ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next