Advertisement

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

12:29 AM Nov 27, 2024 | Team Udayavani |

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್‌ ಬಳಿ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರದ ಪಥ ಬದಲಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆಗೆ ಸುಮಾರು 1 ತಾಸುಗಳ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

Advertisement

ಬಿ.ಸಿ.ರೋಡು ಸರ್ಕಲ್‌ ಬಳಿಕ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ.

ಮಂಗಳವಾರ ಬೆಳಗ್ಗಿನಿಂದ ಮತ್ತೆ ಪಥ ಬದಲಾವಣೆಗೊಂಡಿದ್ದು, ಮಧ್ಯಾಹ್ನದ ವೇಳೆ ರಾಷ್ಟ್ರೀಯ ಹೆದ್ದಾರಿ ಜತೆಗೆ ಧರ್ಮಸ್ಥಳ ಹೆದ್ದಾರಿ, ಬಂಟ್ವಾಳ ಪೇಟೆ ಸಂಪರ್ಕ ರಸ್ತೆಯಲ್ಲೂ ಟ್ರಾಫಿಕ್‌ ಜಾಮ್‌ ಉಂಟಾಯಿತು. ಇದೇ ಸಂದರ್ಭದಲ್ಲಿ ಟಿಪ್ಪರೊಂದು ಕಾರಿಗೆ ಢಿಕ್ಕಿಯಾಗಿ ಮತ್ತಷ್ಟು ಹೊತ್ತು ಟ್ರಾಫಿಕ್‌ ಜಾಮ್‌ ಮುಂದುವರಿಯಿತು. ಅ ಬಳಿಕ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರ ದಟ್ಟಣೆ ನಿಯಂತ್ರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next