Advertisement

ಮೈತ್ರಿ ಸರ್ಕಾರ ಅನ್ನದಾತರ, ಶ್ರೀಸಾಮಾನ್ಯರ ದನಿ

08:53 AM Jan 27, 2019 | Team Udayavani |

ಚಿಕ್ಕಬಳ್ಳಾಪುರ: ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೃಷಿ, ನೀರಾವರಿ, ಆರೋಗ್ಯ ಮತ್ತು ಶಿಕ್ಷಣ ಮಹಿಳೆಯರ ಮತ್ತು ದುರ್ಬಲ ವರ್ಗಗಳ ಅಭಿವೃದ್ಧಿಯ ಮುನ್ನೋಟದೊಂದಿಗೆ ಅನ್ನದಾತರ ಹಾಗೂ ಶ್ರೀಸಾಮಾನ್ಯರ ದನಿಯಾಗಿ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಎಚ್. ಶಿವಶಂಕರರೆಡ್ಡಿ ತಿಳಿಸಿದರು.

Advertisement

ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದ ಬಳಿಕ ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಳೆದ ಆರು ತಿಂಗಳಲ್ಲಿ ಮೈತ್ರಿ ಸರ್ಕಾರ ನಿರೀಕ್ಷೆಗೂ ಮೀರಿ ಜನರ ಸಂಕಷ್ಟಗಳನ್ನು ಅರಿತು ಪರಿಹಾರ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ. ದೇಶಕ್ಕೆ ಮಾದರಿಯಾಗಿ ಮೈತ್ರಿ ಸರ್ಕಾರ 45 ಸಾವಿರ ಕೋಟಿ ರೈತರ ಸಾಲ ಮನ್ನಾಗೆ ಸಂಕಲ್ಪ ತೊಟ್ಟಿದೆ ಎಂದರು. ಕೃಷಿ ವಲಯ ಹಾಗೂ ರೈತರ ಬದುಕಿನಲ್ಲಿ ಬದಲಾವಣೆ ತರುವುದು ಸರ್ಕಾರದ ಮಹತ್ವಕಾಂಕ್ಷೆಯಾಗಿದ್ದು, ಕೃಷಿ ವಲಯದಲ್ಲಿ ಸುಸ್ಥಿರ ಅಭಿವೃದ್ಧಿಗೆ ಅಗತ್ಯ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿನೂತನ ಕೃಷಿ ಪ್ರಯತ್ನಗಳು ಆರಂಭವಾಗಿವೆ.

ಇಸ್ರೇಲ್‌ ಮಾದರಿ ಹಾಗೂ ಶೂನ್ಯ ಬಂಡವಾಳ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ಜಿಲ್ಲೆಯ ನೀರಿನ ಬವಣೆ ಅರಿತು ಶಾಶ್ವತ ಕುಡಿಯುವ ನೀರಿಗಾಗಿ ಎತ್ತಿನಹೊಳೆ ಹಾಗೂ ಜಿಲ್ಲೆಯ ಅಂತರ್ಜಲ ವೃದ್ಧಿಗೆ ಹೆಬ್ಟಾಳ ನಾಗವಾರ ತ್ಯಾಜ್ಯ ನೀರನ್ನು ಸಂಸ್ಕರಿಸಿ ಜಿಲ್ಲೆಯ ಕೆರೆಗಳಿಗೆ ಹರಿಸಲಾಗುವುದು ಎಂದು ತಿಳಿಸಿದರು.

ಆಕರ್ಷಕ ಪಥ ಸಂಚಲನ: ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 70ನೇ ಗಣರಾಜ್ಯೋತ್ಸವದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿದ ಬಳಿಕ ಜಿಲ್ಲಾ ಶಸಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್‌, ಮಹಿಳಾ ಪೊಲೀಸ್‌, ಗೃಹ ರಕ್ಷಕ, ಬಾಲಕರ ಪದವಿ ಕಾಲೇಜಿನ ಎನ್‌ಸಿಸಿ ಸೇರಿದಂತೆ ನಗರದ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿ ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಸಚಿವರು ಪೊಲೀಸ್‌ ಇಲಾಖೆ ತೆರೆದ ಜೀಪಿನಲ್ಲಿ ತೆರಳಿ ಪಥ ಸಂಚಲನ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.

Advertisement

ಅಂಚೆ ಲಕೋಟೆ ಬಿಡುಗಡೆ: ಗಣರಾಜ್ಯೋತ್ಸವಕ್ಕೆ ವಿಶೇಷ ಮೆರಗು ತರುವ ನಿಟ್ಟಿನಲ್ಲಿ ಅಂಚೆ ಇಲಾಖೆ ಹೊರ ತಂದಿದ್ದ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣವಾದ ನಂದಿಗಿರಿಧಾಮ ಹಾಗೂ ಬಾಗೇಪಲ್ಲಿ ತಾಲೂಕಿನ ಗುಮ್ಮನಾಯಕನಪಾಳ್ಯ ಕೋಟೆ ಚಿತ್ರವುಳ್ಳ ವಿಶೇಷ ಅಂಚೆ ಲಕೋಟೆಯನ್ನು ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು. ಈ ವೇಳೆ ಪೋಸ್ಟ್‌ ಮಾಸ್ಟರ್‌ ಜನರ್‌ ದಕ್ಷಿಣ ಕರ್ನಾಟಕ ವಲಯದ ಎಸ್‌.ರಾಜೇಂದ್ರ ಕುಮಾರ್‌, ಕೋಲಾರದ ಹಿರಿಯ ಅಂಚೆ ಅಧೀಕ್ಷಕ ಎಲ್‌.ಮಂಜುನಾಥ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಕೆ.ಸುಧಾಕರ್‌ ವಹಿಸಿದ್ದರು. ವೇದಿಕೆಯಲ್ಲಿ ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಪಂ ಅಧ್ಯಕ್ಷ ಎಚ್.ವಿ.ಮಂಜುನಾಥ, ನಗರಸಭೆ ಅಧ್ಯಕ್ಷ ಎಂ.ಮುನಿಕೃಷ್ಣ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ಜಿಪಂ ಸಿಇಒ ಗುರುದತ್‌ ಹೆಗಡೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕರೆಡ್ಡಿ, ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌, ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ, ನಗರಸಭೆ ಆಯುಕ್ತ ಉಮಾಕಾಂತ್‌, ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ಪ್ರಭುಶಂಕರ್‌ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೆಎಸ್‌ಆರ್‌ಟಿಸಿಯ 23 ಚಾಲಕರಿಗೆ ಬೆಳ್ಳಿ ಪದಕ
70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2017ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಚಿಂತಾಮಣಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ರಾಜ್ಯ ರಸ್ತೆ ಸಾರಿಗೆ ನಿಗಮದ ಡಿಪೋಗಳಲ್ಲಿ ಅಪಘಾತ ಹಾಗೂ ಅಪರಾಧ ರಹಿತವಾಗಿ ವರ್ಷದಲ್ಲಿ 240 ದಿನಗಳ ಕಾಲ ಹಾಜರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಚಿಕ್ಕಬಳ್ಳಾಪುರ ವಿಭಾಗದ ಒಟ್ಟು 23 ಮಂದಿ ಚಾಲಕರಿಗೆ ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಡಳಿತದ ಪರವಾಗಿ ಪ್ರಶಸ್ತಿ ಫ‌ಲಕ, ಬೆಳ್ಳಿ ಪದಕಗಳನ್ನು ಪ್ರದಾನ ಮಾಡಿ ಅಭಿನಂದಿಸಿದರು. ಚಾಲಕರಿಗೆ ತಲಾ 20 ಸಾವಿರ ರೂ, ನಗದು ಬಹುಮಾನ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next