Advertisement

ಗುತ್ತಿಗೆ ನೌಕರರ ಸಂಭಾವನೆ ಶೇ.15 ಹೆಚ್ಚಳ; ಏ.1ರಿಂದ ಅನ್ವಯವಾಗುವಂತೆ ಹೆಚ್ಚಳ

09:50 PM Mar 04, 2023 | Team Udayavani |

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏ.1ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Advertisement

ಈ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕೆಲಸಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ.

5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್‌ಎಚ್‌ಎಂ ಮೆಡಿಕಲ್‌ ಅಧಿಕಾರಿಗಳಿಗೆ (ಎಂಬಿಬಿಎಸ್‌, ಆಯುಷ್‌, ಆಬಿರ್‌ಎಸ್‌ಕೆ, ದಂತವೈದ್ಯ ಸರ್ಜನ್‌ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.

ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.

Advertisement

ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next