Advertisement

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಐಸಿಸ್ ಸಕ್ರಿಯ ಸದಸ್ಯನ ಬಂಧನ

03:26 PM Aug 07, 2022 | Team Udayavani |

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿಯಲ್ಲಿ ಎನ್ಐಎ ‘ಸಕ್ರಿಯ ಐಸಿಸ್ ಸದಸ್ಯ’ನನ್ನು ಬಂಧಿಸಿದೆ.

Advertisement

ನವದೆಹಲಿಯ ಬಾಟ್ಲಾ ಹೌಸ್‌ನಲ್ಲಿ ಶೋಧ ನಡೆಸಿದ ನಂತರ ಇಸ್ಲಾಮಿಕ್ ಸ್ಟೇಟ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಓರ್ವನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಭಾನುವಾರ ತಿಳಿಸಿದೆ.

ಆರೋಪಿಯನ್ನು ಮೊಹ್ಸಿನ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ. ತನಿಖಾ ಸಂಸ್ಥೆಯ ಪ್ರಕಾರ, ಅಹ್ಮದ್ ಪಾಟ್ನಾ ನಿವಾಸಿಯಾಗಿದ್ದು “ಐಸಿಸ್‌ನ ಸಕ್ರಿಯ ಸದಸ್ಯ”. “ಭಾರತ ಮತ್ತು ವಿದೇಶಗಳಲ್ಲಿ ಸಹಾನುಭೂತಿ ಹೊಂದಿರುವವರಿಂದ ಐಸಿಸ್‌ಗಾಗಿ ನಿಧಿ ಸಂಗ್ರಹದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ.

ಐಸಿಸ್‌ನ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಆತ ಈ ಹಣವನ್ನು ಸಿರಿಯಾ ಮತ್ತು ಇತರ ಸ್ಥಳಗಳಿಗೆ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಕಳುಹಿಸುತ್ತಿದ್ದ ಎಂದು ಎನ್‌ಐಎ ಹೇಳಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next