Advertisement

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್‌ಐಎ ದಾಳಿ

10:42 AM Dec 09, 2022 | Team Udayavani |

ಬೆಂಗಳೂರು: ದೇಶದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ) ನಿಷೇಧಗೊಳಿಸಿದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧೆಡೆ ಭಯೋತ್ಪಾದಕ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಲು ಹವಣಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಗುರುವಾರ ರಾಜ್ಯದ ಕಲಬುರಗಿ ಮತ್ತು ಕೇರಳದ ಕೋಝಿಕ್ಕೋಡ್‌ನ‌ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ.

Advertisement

ಇತ್ತೀಚೆಗೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಗೊಳಿಸಲಾಗಿತ್ತು. ಆದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಂದಾಗಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಿಸಲು ಯತ್ನಿಸುತ್ತಿದ್ದಾರೆ. ಅಲ್ಲದೆ, ಈ ನಿಷೇಧದ ಬಳಿಕ ಸಂಘಟನೆಗಳ ಕಾರ್ಯಕರ್ತರು ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ ಸೇರಿ ಇತರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದು, ಅಲ್ಲಿಂದಲೇ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು, ತಮ್ಮ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ದಾಳಿ ನಡೆಸಲಾಗಿದೆ.

ದಾಳಿ ವೇಳೆ ಡಿಜಿಟಲ್‌ ಸಾಧನಗಳು ಮತ್ತು ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ‌ ದೆಹಲಿಯ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿದೆ ಎನ್‌ಐಎ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next