Advertisement
ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
Related Articles
Advertisement
ಏನಿದು ಪ್ರಕರಣ? ಪರಿಶೀಲನೆಗೇನು ಕಾರಣ?
ನಕ್ಸಲ್ (ಸಿಪಿಐ ಮಾವೋವಾದಿ) ಚಳವಳಿಗೆ ಶಕ್ತಿ ತುಂಬಲು 2016ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ತರಬೇತಿ ಕ್ಯಾಂಪ್ ನಡೆಸಲು ನಿರ್ಧರಿಸಲಾಗಿತ್ತು. ಕೇರಳ ರಾಜ್ಯದ ಮಲ್ಲಾಪುರಂ ಜಿಲ್ಲೆಯ ಎಡಕ್ಕರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತರಬೇತಿ ಶಿಬಿರ ಸ್ಥಳ ಗುರುತಿಸಲಾಗಿತ್ತು. ಶಿಬಿರದಲ್ಲಿ ಧ್ವಜಾರೋಹಣ ನೆರವೇರಿಸಿ, ಶಸ್ತ್ರಾಸ್ತ್ರ ಬಳಕೆಯ ತರಬೇತಿ ನೀಡಲು ಚಿಂತಿಸಲಾಗಿತ್ತು. ಈ ಸಂಬಂಧ 2017ರಲ್ಲಿ ಕೇರಳದ ಎಡಕ್ಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರನ್ನು ಬಂಧಿಸಲಾಗಿತ್ತು.
ಮರು ಎಫ್ ಐ ಆರ್ ದಾಖಲಿಸಿದ ಎನ್ಐಎ
ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್ಐಎ ಅಧಿಕಾರಿಗಳು ಮರು ಎಫ್ಐಆರ್ ದಾಖಲು ಮಾಡಿಕೊಂಡರು. ಪ್ರಕರಣದಲ್ಲಿ ಇನ್ನೂ 20 ಮಂದಿ ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕ ನಕ್ಸಲ್ ಚಳವಳಿಯ ಮುಂಚೂಣಿ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ, ವಿಕ್ರಂ ಗೌಡ ಅವರ ಹೆಸರುಗಳು ಈ ಪಟ್ಟಿಯಲ್ಲಿತ್ತು. ಹಾಗಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿ, ಹೊಸನಗರದ ಕೆಲವು ಕಡೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.