Advertisement

ಐಸಿಸ್‌ ನಂಟು : ಕೇರಳದ ಮೂರು ಕಡೆ ಎನ್‌ಐಎ ಪರಿಶೀಲನೆ

09:07 AM Apr 29, 2019 | Vishnu Das |

ತಿರುವಂತಪುರ : ರಾಷ್ಟ್ರೀಯ ಭದ್ರತಾ ದಳದ ಅಧಿಕಾರಿಗಳು ಕೇರಳದ ಮೂರು ಸ್ಥಳಗಳಲ್ಲಿ ಭಾನುವಾರ ಪರಿಶೀಲನೆ ನಡೆಸಿ ಕೆಲವರ ವಿಚಾರಣೆ ನಡೆಸಿದ್ದಾರೆ.

Advertisement

ಕಾಸರಗೋಡಿನಲ್ಲಿ ಐಸಿಸ್‌ ನಂಟು ಹೊಂದಿರುವ ಬಗ್ಗೆ ತಿಳಿದು ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಕೆಲವರ ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.

ಮೂವರು ಶಂಕಿತರನ್ನು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೂವರು ಭಾರತವನ್ನು ತೊರೆದು ಐಸಿಸ್‌ ಸೇರಲು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ.

ಹೆಚ್ಚಿನ ವಿವರಗಳನ್ನ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next