Advertisement
ಇದನ್ನೂ ಓದಿ:ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಸಿಸಿಬಿ
Related Articles
Advertisement
ಪುಣೆಯಲ್ಲಿ ಇಬ್ಬರ ಬಂಧನ
ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್‌ಐಎಗೆ ಬೇಕಾಗಿದ್ದ ಇಬ್ಬರು ಶಂಕಿತ ಆರೋಪಿಗಳನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನ್ಯಾಯಾಲಯ ಜುಲೈ 25ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.
ಬಂಧಿತರನ್ನ ಮೊಹಮ್ಮದ್ ಇಮ್ರಾನ್ ಮೊಹಮ್ಮದ್ ಯೂನುಸ್ ಖಾನ್ (23) ಮತ್ತು ಮೊಹಮ್ಮದ್ ಯೂನಸ್ ಮೊಹಮ್ಮದ್ ಯಾಕೂಬ್ ಸಾಕಿ (24) ಎಂದು ಗುರುತಿಸಲಾಗಿದ್ದು, ಮಧ್ಯಪ್ರದೇಶದ ರತ್ಲಾಮ್ ಮೂಲದವರಾಗಿದ್ದು, ಗ್ರಾಫಿಕ್ ಡಿಸೈನರ್ ಆಗಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇಬ್ಬರೂ ತಲಾ ತಲೆಗಳ ಮೇಲೆ 5 ಲಕ್ಷ ರೂ.ಗಳ ಇನಾಮು ಹೊಂದಿದ್ದರು. ಮಂಗಳವಾರ ಬೆಳಗ್ಗೆ ನಗರದ ಕೊತ್ರುದ್ ಪ್ರದೇಶದಲ್ಲಿ ದ್ವಿಚಕ್ರವಾಹನ ಕದಿಯಲು ಯತ್ನಿಸುತ್ತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರು ಬಂಧಿಸಿದ್ದಾರೆ. ತಪಾಸಣೆ ನಡೆಯುತ್ತಿದ್ದ ವೇಳೆ ಮೂವರು ಶಂಕಿತರಲ್ಲಿ ಒಬ್ಬ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾನೆ.
ರಾಜಸ್ಥಾನದ ಭಯೋತ್ಪಾದನೆ ಸಂಬಂಧಿತ ಪ್ರಕರಣದಲ್ಲಿ ಎನ್‌ಐಎಗೆ ಬೇಕಾಗಿದ್ದ ಇಬ್ಬರೂ ಕಳೆದ 16 ತಿಂಗಳಿಂದ ನಗರದ ಕೊಂಡ್ವಾ ಪ್ರದೇಶದಲ್ಲಿ ನೆಲೆಸಿದ್ದರು. ಶೋಧದ ಸಮಯದಲ್ಲಿ, ಅವರ ಮನೆಯಿಂದ ಒಂದು ಲೈವ್ ಕಾರ್ಟ್ರಿಡ್ಜ್, ಎರಡು ಹೋಲ್ಸ್ಟರ್‌ಗಳು, ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಂಕಿತರು ಯಾವುದೇ ಮಾರಕಾಸ್ತ್ರಗಳನ್ನು ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತಪ್ಪಿಸಿಕೊಂಡ ಮೂರನೇ ಶಂಕಿತನನ್ನ ಹಿಡಿಯಲು ಅನೇಕ ತಂಡಗಳು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.