Advertisement

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ : ಓರ್ವ ಮುಖಂಡ ವಶಕ್ಕೆ

11:05 AM Sep 22, 2022 | Team Udayavani |

ಶಿವಮೊಗ್ಗ : ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಗುರುವಾರ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಪಿಎಫ್ಐ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಶಿವಮೊಗ್ಗದಲ್ಲಿರುವ ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ಅಧಿಕಾರಿಗಳು ದಾಳಿ ನಡೆಸಿ ಪಿಎಫ್ಐ ಸಂಘಟನೆ ಮುಖಂಡನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಶಾಹಿದ್ ಖಾನ್ ಮನೆಯಲ್ಲಿ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ರಾತ್ರಿ 2 ಗಂಟೆ ಹೊತ್ತಿಗೆ ಬಂದಿದ್ದ ಎನ್ಐಎ ಅಧಿಕಾರಿಗಳು ಬೆಳಗಿನ ಜಾವ 5 ಗಂಟೆವರೆಗೆ ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಶೋಧ ಕಾರ್ಯ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಮಂಗಳೂರು: ಸರಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next