ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಮೇಲೆ ಉಗ್ರರ ದಾಳಿ ಪ್ರಕರಣ ಹೆಚ್ಚಿರುವ ಬೆನ್ನಲ್ಲೇ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಹಲವೆಡೆ ದಾಳಿ ನಡೆದಿದ್ದಾರೆ.
ಹಲವಾರು ಉಗ್ರ ಸಂಘಟನೆಗಳೊಂದಿಗೆ ಸಂಬಂಧವಿರುವ ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಹೇಳಲಾಗಿದೆ.
ಲಷ್ಕರ್, ಜೈಶ್, ಹಿಜ್ಬುಲ್ ಮುಜಾಹಿದೀನ್, ಅಲ್ ಬದ್ರ್, ರೆಸಿಸ್ಟೆನ್ಸ್ ಫೋರ್ಸ್ (ಟಿಆರ್‌ಎಫ್) ಮತ್ತು ಪಿಎಎಫ್ ಎಫ್ ಉಗ್ರರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಸರಣಿ ದಾಳಿಗಳಲ್ಲಿ ಭಾಗಿಯಾಗಿರುವುದಾಗಿ ಎನ್‌ಐಎ ಹೇಳಿದೆ.
ಈ ಹಿಂದೆ ಅ.13ರಂದು ಶ್ರೀನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್‌ಐಎ ಐವರನ್ನು ಬಂಧಿಸಿತ್ತು. ಅದಕ್ಕೂ ಕೆಲ ದಿನಗಳ ಮೊದಲು ನಾಲ್ವರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ:ಎರಡೂ ಡೋಸ್ ಲಸಿಕೆ ಪಡೆದವರಿಗಷ್ಟೇ ಹಜ್ ಯಾತ್ರೆಗೆ ಅನುಮತಿ