Advertisement

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

11:06 AM Dec 19, 2024 | Team Udayavani |

ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರು 2015ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಸ್ಫೋಟ ನಡೆಸಲು ಸಂಚು ರೂಪಿಸಿರುವುದು ಹಾಗೂ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕ ಸಾಮಗ್ರಿ ಪೂರೈಸಿರುವ ಪ್ರಕರಣದಲ್ಲಿ ಮೂವರು ಶಂಕಿತ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ್ದ ಎನ್‌ಐಎ ವಿಶೇಷ ನ್ಯಾಯಾಲಯವು ಡಿ.23ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

Advertisement

ಇಂಡಿಯನ್‌ ಮುಜಾಹಿದ್ದೀನ್‌ (ಐಎಂ) ಸಂಘಟನೆಯಲ್ಲಿ ಗುರುತಿಸಿಕೊಂಡಿ ದ್ದ ಉತ್ತರ ಕನ್ನಡ ಜಿಲ್ಲೆ ಭಟ್ಕಳದ ವೈದ್ಯ ಸೈಯದ್‌ ಇಸ್ಮಾಯಿಲ್‌ ಅಫಾಕ್‌, ಅಬ್ದುಲ್‌ ಸುಬೂರು, ಸದ್ದಾಂ ಹುಸೇನ್‌ ದೋಷಿಗಳೆಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣ ಬುಧವಾರಕ್ಕೆ ಕಾಯ್ದಿರಿಸಲಾಗಿತ್ತು. ಇದೀಗ ಶಿಕ್ಷೆಯ ಪ್ರಮಾಣವನ್ನು ಡಿ.23ರಂದು ಪ್ರಕಟಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರು 2015ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಆರೋಪ ಮೂವರ ಮೇಲಿತ್ತು. ಉಗ್ರರು ಪಾಕಿಸ್ತಾನದಿಂದ ಬಂದ ಸೂಚನೆಯಂತೆ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಕಂಡು ಬಂದಿದೆ.

ಸ್ಫೋಟ ಸಂಚಿನ ಕುರಿತು 2015ರಲ್ಲಿ ಪುಲಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2015ರಲ್ಲಿ ಬೆಂಗಳೂರಿನ ಪುಲಕೇಶಿನಗರ ಹಾಗೂ ಭಟ್ಕಳ ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಬಂಧಿತರಿಂದ ಅಪಾರ ಪ್ರಮಾಣದ ನ್ಪೋಟಕ ವಸ್ತುಗಳನ್ನು ಜಪ್ತಿ ಮಾಡ ಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next