ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನವಾಗಿದೆ. ಗುವಾಹತಿಯಲ್ಲಿ ಐಈಡಿ (IED) ಬಾಂಬ್ ಇಟ್ಟು ಬೆಂಗಳೂರಿಗೆ ಬಂದಿದ್ದ ಶಂಕಿತ ಉಗ್ರನನ್ನು ಜಿಗಣಿಯಲ್ಲಿ ಬಂಧಿಸಲಾಗಿದೆ.
ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಶಂಕಿತ ಉಗ್ರ. ಅಸ್ಸಾಂ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬುಧವಾರ (ಸೆ.25)ರಂದು ಬಂಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಈತ ಉಲ್ಫಾ ಸಂಘನೆಗೆ ಸೇರಿದವು ಎನ್ನಲಾಗಿದೆ. ಈತ ಗುವಾಹತಿಯಲ್ಲಿ ಐಈಡಿ ಬಾಂಬ್ ಇಟ್ಟು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ.
ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದಗಿರೀಶ್ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದ. ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.
ಈತ ಕಳೆದ ಆಗಸ್ಟ್ ನಲ್ಲಿ ಗುವಾಹತಿಯಲ್ಲಿ ಬಾಂಬ್ ಇಟ್ಟಿದ್ದ. ಸುಮಾರು ಐದು ಬಾಂಬ್ ಗಳನ್ನ ಇಟ್ಟಿದ್ದ ಆತ, ಬೆಂಗಳೂರಿನ ಜಿಗಣಿಗೆ ಬಂದು ವಾಸವಿದ್ದು, ಇಲ್ಲಿಯೂ ಒಂದಷ್ಟು ಪ್ಲಾನ್ ಗಳನ್ನು ನಡೆಸುತ್ತಿದ್ದ ಎನ್ನಲಾಗಿದೆ.
ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳು ವಶ ಪಡಿಸಲಾಗಿದೆ. ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್ ಐಎ ತಂಡವು ಅಸ್ಸಾಂಗೆ ಕರೆದೊಯ್ದಿದ್ದಾರೆ.