Advertisement

Nidhi Subbaiah: ಹೊಸ ಸಿನಿಮಾ ಮೇಲೆ ಕೂರ್ಗ್‌ ಬೆಡಗಿ ನಿರೀಕ್ಷೆ

03:15 PM Jun 09, 2024 | Team Udayavani |

ನಟಿ ನಿಧಿ ಸಿಕ್ಕಾಪಟ್ಟೆ ನಿರೀಕ್ಷೆಯೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ ಹೊಸ ಸಿನಿಮಾದ ಬಿಡುಗಡೆ. ಹೌದು, ನಿಧಿ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಶೆಫ್ ಚಿದಂಬರ’ ಚಿತ್ರ ಜೂ.14ರಂದು ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು.

Advertisement

ಇತ್ತೀಚೆಗೆ ನಿಧಿ ಅವರ ಪೋಸ್ಟರ್‌ ಬಿಡುಗಡೆಯಾಗಿ ಕುತೂಹಲ ಮೂಡಿಸಿತ್ತು.ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು ಎಂಬ ಕುತೂಹಲವಿದೆ. ಆನಂದ್‌ ರಾಜ್‌ ಈ ಚಿತ್ರದ ನಿರ್ದೇಶಕರು.

ನಿಧಿ ತಮ್ಮ ಚಿತ್ರದಲ್ಲಿ ನಟಿಸಿರುವ ಬಗ್ಗೆ ಮಾತನಾಡು ಅವರು, “ಬಹಳ ದಿನಗಳ ನಂತರ ನಿಧಿ ಸುಬ್ಬಯ್ಯ ಅವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನಿಧಿ ಅವರ ಪೋಸ್ಟರ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕುತೂಹಲ ಮೂಡಿಸಿರುವ ನಿಧಿ ಅವರ ಪಾತ್ರ ಏನು ಎಂಬುದನ್ನು ಚಿತ್ರದಲ್ಲಿ ನೋಡಬೇಕು’ ಎನ್ನುತ್ತಾರೆ ನಿರ್ದೇಶಕ ಆನಂದರಾಜ್.

ಡಾರ್ಕ್‌ ಕಾಮಿಡಿ ಜಾನರ್‌ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.

ದಮ್ತಿ ಪಿಕ್ಚರ್ಸ್‌ ಲಾಂಛನದಲ್ಲಿ ರೂಪ ಡಿ.ಎನ್‌ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್‌ ಪರಶುರಾಮ್‌ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್‌ ಮುರಳಿಧರ್‌ ಸಂಗೀತ ನಿರ್ದೇಶನ, ವಿಜೇತ್‌ ಚಂದ್ರ ಸಂಕಲನ, ವಿಕ್ರಾಂತ್‌ ರೋಣ ಖ್ಯಾತಿಯ ಆಶಿಕ್‌ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್‌ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next