Advertisement
ಕೇರಳ ರಾಜ್ಯದಿಂದ ಜಿಲ್ಲೆಗೆ ಪ್ರಯಾಣಿಸುವವರಲ್ಲಿ ನಿಫಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರ ಪ್ರವೇಶವನ್ನು ನಿರ್ಬಂಧಿ ಸಲಾಗುತ್ತದೆ. ಕೇರಳದಿಂದ ಬಂದವರ ಬಗ್ಗೆ 21 ದಿನಗಳವರೆಗೆ ನಿಗಾವಹಿಸ ಲಾಗುತ್ತದೆ. ಈ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ ಅಂತಹ ಶಂಕಿತರ ಪ್ರಕರಣಗಳನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.
ಪ್ರತ್ಯೇಕ ಐಸೋಲೇಷನ್ ಕೊಠಡಿಯನ್ನು ಸಿದ್ಧವಾಗಿರಿಸಲಾಗಿದೆ. ನಿಫಾ ವೈರಸ್ ಬಂದ ರೋಗಿಗಳನ್ನು ಉಪಚರಿಸುವಾಗ ಮಾಸ್ಕ್ ಮತ್ತು ಕೈ ಗವಸು (ಗ್ಲೌಸ್)ಗಳನ್ನು ಧರಿಸಬೇಕೆಂದು ಸೂಚಿಸಲಾಗಿದೆ. ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗುತ್ತದೆ. ಆಶಾಹಾಗೂ ಆರೋಗ್ಯ ಕ್ಷೇತ್ರ ಸಿಬ್ಬಂದಿ ಮೂಲಕ ಸರ್ವೇಕ್ಷಣ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ “ಉದಯವಾಣಿ’ಗೆ ತಿಳಿಸಿದರು. ಗುಂಡ್ಲುಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜ್ವರ, ಮೈಕೈ ನೋವು, ಬೆವರುವುದು, ವಾಂತಿ, ತಲೆಸುತ್ತು ನಿಫಾ ವೈರಸ್ ಸೋಂಕಿತರ ರೋಗ ಲಕ್ಷಣಗಳಾಗಿದ್ದು, ಇಂಥ ರೋಗಲಕ್ಷಣಗಳಿದ್ದವರ ಮೇಲೆ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದರು.
Related Articles
Advertisement
ಸಾರ್ವಜನಿಕರಲ್ಲಿ ನಿಫಾಕುರಿತು ಅರಿವು ಮೂಡಿಸಿ ಹೋಟೆಲ್ ಮತ್ತು ರೆಸಾರ್ಟ್‌ಗಳಿಗೆ ಭೇಟಿ ನೀಡುವ ಕೇರಳ ಪ್ರವಾಸಿಗರ ಮೇಲೆ ನಿಗಾ ವಹಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಸೋಂಕಿನ ಲಕ್ಷಣ ಇರುವ ವ್ಯಕ್ತಿಗಳಿದ್ದರೆ ಅಂಥವರ ಬಗ್ಗೆ ಮಾಹಿತಿಯನ್ನು ವೈದ್ಯಾಧಿಕಾರಿಗಳಿಗೆ ನೀಡುವಂತೆ ಸೂಚಿಸಲಾಗಿದೆ ಎಂದರು.
ಹಂದಿ, ಕುದುರೆ, ನಾಯಿ, ಬೆಕ್ಕುಗಳಂತಹ ಸೋಂಕಿತ ಜಾನುವಾರುಗಳು ಮಧ್ಯಂತರ ಮೂಲಗಳಾಗಿರುವುದರಿಂದ ಇವುಗಳನ್ನು ಪ್ರತ್ಯೇಕ ವಾಗಿ ಇರಿಸಬೇಕಾಗುತ್ತದೆ. ಶಂಕಿತ ವ್ಯಕ್ತಿಯು ಬಳಸುವ ಬಟ್ಟೆ, ಪಾತ್ರೆಗಳು ಹಾಗೂ ಮುಖ್ಯವಾಗಿ ಸ್ನಾನ ಮತ್ತು ಶೌಚಾಲಯದಲ್ಲಿ ಬಳಸುವ ವಸ್ತುಗಳನ್ನು ಪ್ರತ್ಯೇಕವಾ ಗಿಟ್ಟು ಶುಚಿಗೊಳಿಸಬೇಕು. ಹಸ್ತಲಾಘವ ಮಾಡ ಬಾರದು. ಸೋಂಕಿತರ ಸಂಪರ್ಕಕ್ಕೆ ಬಂದನಂತರ ಕೈಗಳನ್ನು ಸ್ವಚ್ಚವಾಗಿ ತೊಳೆದುಕೊಳ್ಳುವಂತೆ ಸೂಚಿಸಲಾಗಿದೆ.
ನೆರವಿಗೆಕರೆ ಮಾಡಿ ಹಂದಿ ಸಾಕಾಣಿಕಾಕೇಂದ್ರಗಳಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ಅಲ್ಲಿನ ಸಿಬ್ಬಂದಿ ವೈಯಕ್ತಿಕ ರಕ್ಷಣಾ ಕ್ರಮಗಳನ್ನು ಅನುಸರಿಸಬೇಕು. (ಮಾಸ್ಕ್, ಗ್ಲೌಸ್ ಹಾಗೂ ಪಿಪಿಇ ಕಿಟ್ ಧರಿಸುವುದು). ಹಂದಿ ಸಾಕಾಣಿಕಾ ವ್ಯಾಪ್ತಿಯಲ್ಲಿ ಬಾವಲಿಗಳು ಹಂದಿಗಳ ಸಂಪರ್ಕಕ್ಕೆ ಬಾರದಂತೆ ಮುಂಜಾಗ್ರತೆ ವಹಿಸಬೇಕು. ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡುವುದನ್ನು ಮುಂದೂಡಬೇಕು. ನೆರವಿಗಾಗಿ 10 ಕ್ಕೆ ಕೆರೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.
ಹಣ್ಣು ತಿನ್ನುವಾಗ ಎಚ್ಚರವಹಿಸಿ: ಇಲಾಖೆ ಸೂಚನೆಎಲ್ಲ ರೀತಿಯ ಹಣ್ಣುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಅಥವಾ ಬೇಯಿಸಿ ತಿನ್ನಬೇಕು. ಜ್ವರ ರೀತಿಯ ಲಕ್ಷಣಗಳು ಕಂಡುಬಂದರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ನಿಫಾ ವೈರಸ್ ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು ತಿಂದರೆ ಮನುಷ್ಯರಿಗೂ ಈ ಸೋಂಕು ತಗುಲುವುದರಿಂದ ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು. ಬಾವಲಿಗಳ ಪ್ರವೇಶ ತಪ್ಪಿಸಲು, ತೆರೆದ ಬಾವಿಗಳಿಗೆ ಜಾಲರಿಯನ್ನು ಅಳವಡಿಸಬೇಕು. ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ರೋಗಿಯ ಶರೀರ ಸ್ರಾವ (ರಕ್ತ, ಜೊಲ್ಲು, ಮೂತ್ರ ಇತ್ಯಾದಿ) ಸೇರದಂತೆ ನೋಡಿಕೊಳ್ಳಬೇಕು. ಹೋಟೆಲ್, ಜ್ಯೂಸ್ ಅಂಗಡಿಗಳಲ್ಲಿ ಉಪಯೋಗಿಸುವ ಲೋಟ ಮತ್ತು ತಟ್ಟೆಗಳನ್ನು ಬಿಸಿನೀರಿನಲ್ಲಿ ಶುಚಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದರು. ಕೇರಳ ಗಡಿಭಾಗದಲ್ಲಿ ಹೈ ಅಲರ್ಟ್‌ಘೋಷಿಸಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ತನಿಖಾಠಾಣೆಯಲ್ಲಿ ಒಳಬರುವ ಹಾಗೂ ಹೊರ ಹೋಗುವ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗುತ್ತದೆ. ನಿಫಾ ವೈರಸ್ ಜಿಲ್ಲೆಗೆ ಹರಡದಂತೆಕಟ್ಟೆಚ್ಚರ ವಹಿಸಲಾಗಿದೆ.
-ಡಾ. ವಿಶ್ವೇಶ್ವರಯ್ಯ, ಡಿಎಚ್‌ಒ,
ಚಾ.ನಗರ -ಕೆ.ಎಸ್. ಬನಶಂಕರ ಆರಾಧ್ಯ