ಮುಂಬೈ: ಶುಕ್ರವಾರ (ಜುಲೈ 19) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಬರೋಬ್ಬರಿ 700ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಾಣುವ ಮೂಲಕ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದರ ಜೊತೆಗೆ ಸೂಚ್ಯಂಕ ಕುಸಿತದ ಪರಿಣಾಮ ಹೂಡಿಕೆದಾರರು 8 ಲಕ್ಷ ಕೋಟಿ ರೂಪಾಯಿ ಕಳೆದುಕೊಳ್ಳುವಂತಾಗಿದೆ.
ಜಾಗತಿಕ ಷೇರುಪೇಟೆಯ ನೀರಸ ವಹಿವಾಟು ದೇಶಿಯ ಷೇರುಪೇಟೆ ವಹಿವಾಟಿನ ಮೇಲೆ ಪರಿಣಾಮ ಬೀರಿರುವುದಾಗಿ ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಇದನ್ನೂ ಓದಿ:Bangladesh ಹಿಂಸಾಚಾರ ; 20 ಸಾವಿರಕ್ಕೂ ಹೆಚ್ಚು ಭಾರತೀಯರು ಸುರಕ್ಷಿತ ಎಂದ MEA
ಷೇರುಪೇಟೆಯ ಸಂವೇದಿ ಸೂಚ್ಯಂಕ 739 ಅಂಕಗಳಷ್ಟು ಇಳಿಕೆಯಾಗಿದ್ದು, 80,604.65 ಅಂಕಗಳಿಗೆ ಕುಸಿದಿದೆ. ಅಲ್ಲದೇ ಎನ್ ಎಸ್ ಇ ನಿಫ್ಟಿ ಕೂಡಾ 270 ಅಂಕಗಳಷ್ಟು ಕುಸಿತ ಕಂಡಿದ್ದು, 24, 530.90 ಅಂಕಗಳ ಮಟ್ಟದಲ್ಲಿ ವಹಿವಾಟು ಕೊನೆಗೊಂಡಿದೆ.
ಷೇರುಮಾರುಕಟ್ಟೆಯ ಒಟ್ಟು ಬಂಡವಾಳ ಅಂದಾಜು 454.3 ಲಕ್ಷ ಕೋಟಿಯಿಂದ 446.3 ಲಕ್ಷ ಕೋಟಿಗೆ ಇಳಿಕೆಯಾಗಿದೆ. ಇದರಿಂದಾಗಿ ಶುಕ್ರವಾರದ ಒಂದೇ ದಿನದ ವಹಿವಾಟಿನಲ್ಲಿ ಹೂಡಿಕೆದಾರರು ಕೋಟ್ಯಂತರ ರೂಪಾಯಿ ಕಳೆದುಕೊಂಡಂತಾಗಿದೆ.