ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 82.94 ಅಂಕಗಳ ಮುನ್ನಡೆಯನ್ನು ಸಾಧಿಸಿ 31,929.83 ಅಂಕಗಳ ಮಟ್ಟಕ್ಕೇರಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 23.75 ಅಂಕಗಳ ಮುನ್ನಡೆಯನ್ನು ದಾಖಲಿಸಿ 10,012.50 ಅಂಕಗಳ ಮಟ್ಟವನ್ನು ತಲುಪಿತು.
ಆರಂಭಿಕ ವಹಿವಾಟಿನಲ್ಲಿ 777 ಶೇರುಗಳು ಮುನ್ನಡೆ ಸಾಧಿಸಿದರೆ 214 ಶೇರುಗಳು ಹಿನ್ನಡೆಗೆ ಗುರಿಯಾದವು.
ಲೂಪಿನ್, ಲಾರ್ಸನ್, ಇಂಡಿಯಾ ಬುಲ್ಸ್ ಹೌಸಿಂಗ್, ಇಂಡಸ್‌ಇಂಡ್ ಬ್ಯಾಂಕ್, ಮಹೀಂದ್ರ, ಅರಬಿಂದೋ ಫಾರ್ಮಾ, ಸಿಪ್ಲಾ ಮತ್ತು ಟಾಟಾ ಸ್ಟೀಲ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು.
ಎಚ್ ಡಿ ಎಫ್ ಸಿ, ಕೋಟಕ್ ಮಹೀಂದ್ರ ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಶೇರುಗಳು ಹಿನ್ನಡೆಗೆ ಗುರಿಯಾದವು.
ಡಾಲರ್ ಎದುರು ರೂಪಾಯಿ ವಿನಿಮಯ ದರ 9 ಪೈಸೆಗಳಷ್ಟು ಸುಧಾರಿಸಿದ್ದು ಶೇರು ಮಾರುಕಟ್ಟೆಗೆ ಇದು ಹೊಸ ಉತ್ಸಾಹವನ್ನು ತುಂಬಿತು.