ಮುಂಬಯಿ: 2023ನೇ ಸಾಲಿನಲ್ಲಿ ದೇಶದ ಜಿಡಿಪಿ ಶೇ.8ರಿಂದ 8.5ರ ನಿರೀಕ್ಷೆಯಲ್ಲಿರುವುದಾಗಿ ಕೇಂದ್ರ ಸರ್ಕಾರ ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಿರುವುದು ಹಾಗೂ ಫೆ.1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ (ಜನವರಿ 31) ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 800ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಹಿಜಾಬ್ ಹಾಕದೇ ಬರಲಾಗುವುದಿಲ್ಲ ಎಂದರೆ ಕಾಲೇಜಿಗೆ ಬರಬೇಡಿ – ಶಾಸಕ ರಘುಪತಿ ಭಟ್
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 813.94 ಅಂಕಗಳಷ್ಟು ಏರಿಕೆಯಾಗಿದ್ದು, 58,014.17 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 237.80 ಅಂಕ ಏರಿಕೆಯೊಂದಿಗೆ 17,339.80 ಅಂಕಗಳ ಮಟ್ಟಕ್ಕೆ ತಲುಪಿದೆ.
ಟೆಕ್ ಮಹೀಂದ್ರ, ಟಾಟಾ ಮೋಟಾರ್ಸ್, ವಿಪ್ರೋ, ಬಿಪಿಸಿಎಲ್ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಯುಪಿಎಲ್, ಕೋಲ್ ಇಂಡಿಯಾ ಮತ್ತು ಎಚ್ ಯುಎಲ್ ಷೇರು ನಷ್ಟ ಕಂಡಿದೆ.
ಇಂದು ಮಧ್ಯಾಹ್ನ 12.30ರ ಹೊತ್ತಿಗೆ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 1,015 ಅಂಕಗಳಷ್ಟು ಏರಿಕೆಯಾಗಿದ್ದು, 58,215 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 300 ಅಂಕ ಏರಿಕೆಯೊಂದಿಗೆ 17,402 ಅಂಕಗಳ ಮಟ್ಟ ತಲುಪಿತ್ತು.