ಮುಂಬೈ: ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಬುಧವಾರ (ನವೆಂಬರ್ 29) 727.21 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 727.21 ಅಂಕಗಳಷ್ಟು ಏರಿಕೆಯೊಂದಿಗೆ 66.901.91 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ನಿಫ್ಟಿ 206.90 ಅಂಕಗಳಷ್ಟು ಏರಿಕೆಯೊಂದಿಗೆ 20,096.60 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸಂವೇದಿ ಸೂಚ್ಯಂಕ, ನಿಫ್ಟಿ ಏರಿಕೆಯಿಂದ ಹೀರೋ ಮೋಟೊಕಾರ್ಪ್, ಮಹೀಂದ್ರ & ಮಹೀಂದ್ರ, ಆಕ್ಸಿಸ್ ಬ್ಯಾಂಕ್, ವಿಪ್ರೋ ಮತ್ತು ಟಾಟಾ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಒಎನ್ ಜಿಸಿ, ನೆಸ್ಲೆ ಇಂಡಿಯಾ, ಈಚರ್ ಮೋಟಾರ್ಸ್, ಅದಾನಿ ಎಂಟರ್ ಪ್ರೈಸಸ್ ಮತ್ತು ಡಿವಿಸ್ ಲ್ಯಾಬ್ ಷೇರು ನಷ್ಟ ಕಂಡಿದೆ.
700ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ಸೆನ್ಸೆಕ್ಸ್ ವಹಿವಾಟು ಮುಕ್ತಾಯಗೊಂಡಿದ್ದು, ಇಂದು ಆಟೋ, ಬ್ಯಾಂಕ್, ಐಟಿ ಹಾಗೂ ತೈಲ ಮತ್ತು ಅನಿಲ ಸೆಕ್ಟರ್ ಗಳ ಷೇರು ಲಾಭಗಳಿಸಿದೆ.