ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ (ಜುಲೈ 04) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಹೆಬ್ರಿ: ಅಕ್ರಮ ಜಾನುವಾರು ಸಾಗಾಟ ಓರ್ವ ಸೆರೆ,ಇನ್ನೋರ್ವ ಪರಾರಿ
ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 326.84 ಅಂಕಗಳಷ್ಟು ಏರಿಕೆಯೊಂದಿಗೆ 53,234.77 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 83.40 ಅಂಕ ಇಳಿಕೆಯಾಗಿದ್ದು 15,835.50 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಇಂದು ಬೆಳಗ್ಗೆ ಬಾಂಬೆ ಷೇರುಪೇಟೆಯಲ್ಲಿನ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಮಧ್ಯಂತರ ವಹಿವಾಟಿನ ವೇಳೆ ಸೆನ್ಸೆಕ್ಸ್ ಮತ್ತಷ್ಟು ಏರಿಕೆ ಕಂಡಿರುವುದಾಗಿ ಮಾರುಕಟ್ಟೆ ವರದಿ ತಿಳಿಸಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಎಚ್ ಯುಎಲ್, ಬ್ರಿಟಾನಿಯಾ ಇಂಡಸ್ಟ್ರೀಸ್, ಇಂಡಸ್ ಇಂಡ್ ಬ್ಯಾಂಕ್, ಐಟಿಸಿ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಜೆಎಸ್ ಡಬ್ಲ್ಯು ಸ್ಟೀಲ್, ಒಎನ್ ಜಿಸಿ, ಟಿಸಿಎಸ್, ಟಾಟಾ ಸ್ಟೀಲ್, ಸಿಪ್ಲಾ ಷೇರುಗಳು ನಷ್ಟ ಕಂಡಿದೆ.