ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ವಹಿವಾಟಿನ ಪರಿಣಾಮ ಮಂಗಳವಾರ(ಡಿಸೆಂಬರ್ 21) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 497 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ನನ್ನ ಮಕ್ಕಳ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಮಾಡಲಾಗಿದೆ: ಪ್ರಿಯಾಂಕಾ ಗಾಂಧಿ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 497 ಅಂಕ ಏರಿಕೆಯಾಗಿದ್ದು, 56,319.01 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 156.60 ಅಂಕ ಏರಿಕೆಯೊಂದಿಗೆ 16,770.80 ಅಂಕಗಳ ಮಟ್ಟ ತಲುಪಿದೆ.
ಎಚ್ ಸಿಎಲ್ ಟೆಕ್ನಾಲಜೀಸ್, ವಿಪ್ರೋ, ಯುಪಿಎಲ್, ಅದಾನಿ ಪೋರ್ಟ್ಸ್, ಟಾಟಾ ಸ್ಟೀಲ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಪವರ್ ಗ್ರಿಡ್, ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫೈನಾನ್ಸ್, ಸಿಪ್ಲಾ, ಎಸ್ ಬಿಐ ಷೇರುಗಳು ನಷ್ಟಕಂಡಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ 1,190 ಅಂಕಗಳಷ್ಟು ಏರಿಕೆಯೊಂದಿಗೆ 55,822 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 371 ಅಂಕಗಳಷ್ಟು ಏರಿಕೆಯಾಗಿದ್ದು, 16,614 ಅಂಕಗಳ ಮಟ್ಟ ತಲುಪಿತ್ತು.