ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಶುಕ್ರವಾರ (ಜುಲೈ 29) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 700ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಬೆರಳ ತುದಿಯಲ್ಲಿ ‘ಸ್ಮಾರ್ಟ್’ ಒನ್ ಆ್ಯಪ್: ಸಾರ್ವಜನಿಕರಿಗೆ ಲಭ್ಯವಾಗಲಿದೆ ಹೊಸ ಆ್ಯಪ್
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 712.46 ಅಂಕಗಳಷ್ಟು ಏರಿಕೆಯಾಗಿದ್ದು, 57,570.25 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 228.70 ಅಂಕಗಳಷ್ಟು ಏರಿಕೆಯೊಂದಿಗೆ 17,158.30 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಎಸ್ ಬಿಐ ಲೈಫ್ ಇನ್ಸೂರೆನ್ಸ್, ಟಾಟಾ ಸ್ಟೀಲ್, ಸನ್ ಫಾರ್ಮಾ, ಎಚ್ ಡಿಎಫ್ ಸಿ ಲೈಫ್ ಮತ್ತು ಹಿಂಡಲ್ಕೋ ಇಂಡಸ್ಟ್ರೀಸ್ ಷೇರು ಲಾಭಗಳಿಸಿದೆ. ಮತ್ತೊಂದೆಡೆ ಡಾ.ರೆಡ್ಡೀಸ್ ಲ್ಯಾಬ್ಸ್, ಕೋಟಕ್ ಮಹೀಂದ್ರ ಬ್ಯಾಂಕ್, ಎಸ್ ಬಿಐ, ಆ್ಯಕ್ಸಿಸ್ ಬ್ಯಾಂಕ್ ಷೇರು ನಷ್ಟ ಕಂಡಿದೆ.
ಗುರುವಾರ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,041.47 ಅಂಕಗಳಷ್ಟು ಏರಿಕೆಯೊಂದಿಗೆ 56,875.79 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 287.80 ಅಂಕಗಳಷ್ಟು ಏರಿಕೆಯೊಂದಿಗೆ 16,929.60 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು.