ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ವಹಿವಾಟು, ಕಚ್ಛಾ ತೈಲ ಬೆಲೆ ಇಳಿಕೆ ನಿರೀಕ್ಷೆ ಹಾಗೂ ಎರಡು ವಾರಗಳ ನಂತರದ ರಷ್ಯಾ, ಉಕ್ರೇನ್ ನಡುವಿನ ಶಾಂತಿ ಮಾತುಕತೆಯ ಹಿನ್ನೆಲೆಯಲ್ಲಿ ಮಂಗಳವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 350 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:BJP ಸರ್ಕಾರ ಬಡವರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ: ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 350.16 ಅಂಕಗಳಷ್ಟು ಏರಿಕೆಯೊಂದಿಗೆ 57,943.65 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 103.30 ಅಂಕಗಳಷ್ಟು ಏರಿಕೆಯಾಗಿದ್ದು, 17,325.30 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಈಚರ್ ಮೋಟಾರ್ಸ್, ಡಿವೀಸ್ ಲ್ಯಾಬ್ಸ್, ಜೆಎಸ್ ಡಬ್ಲ್ಬು ಸ್ಟೀಲ್, ಎಚ್ ಡಿಎಫ್ ಸಿ ಮತ್ತು ಅದಾನಿ ಪೋರ್ಟ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಹೀರೋ Motocorp, ಒಎನ್ ಜಿಸಿ, ಕೋಲ್ ಇಂಡಿಯಾ, ಐಒಸಿ ಮತ್ತು ಐಟಿಸಿ ಷೇರುಗಳು ನಷ್ಟ ಕಂಡಿದೆ.
ಹೀರೋ ಮೋಟೊ ಕಾರ್ಪೋರೇಷನ್ 1,000ಕೋಟಿಗಿಂತಲೂ ಅಧಿಕ ನಕಲಿ ಖರ್ಚನ್ನು ತೋರಿಸಿರುವುದಾಗಿ ಆದಾಯ ತೆರಿಗೆ ಇಲಾಖೆ ಆರೋಪಿಸಿದ ಹಿನ್ನೆಲೆಯಲ್ಲಿ ಕಂಪನಿಯ ಷೇರು ಮೌಲ್ಯ ಶೇ.7ರಷ್ಟು ಕುಸಿತ ಕಂಡಿದ್ದು, ಹೂಡಿಕೆದಾರರು ಭಾರೀ ನಷ್ಟ ಅನುಭವಿಸುವಂತಾಗಿದೆ.