ಮುಂಬಯಿ: ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬುಧವಾರ(ಫೆ.09) ಹಾಗೂ ಎನ್ ಎಸ್ ಇ ನಿಫ್ಟಿ ಅಂಕ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದ್ದು, ಹೂಡಿಕೆದಾರರಲ್ಲಿ ಸಂತಸ ಮೂಡಿಸಿದೆ.
ಇದನ್ನೂ ಓದಿ:ಐಪಿಎಲ್ 2022: ಹಾರ್ದಿಕ್ ಪಾಂಡ್ಯ ನಾಯಕತ್ವದ ಅಹಮದಾಬಾದ್ ತಂಡದ ಹೆಸರು ಪ್ರಕಟ
ಕಳೆದ ಮೂರು ದಿನಗಳಿಂದ ಭಾರೀ ಏರಿಳಿಕೆಗೆ ಸಾಕ್ಷಿಯಾಗಿದ್ದ ಮುಂಬಯಿ ಷೇರುಪೇಟೆ ಇಂದು ಬೆಳಗ್ಗೆ ಆರಂಭಿಕ ವಹಿವಾಟಿನಲ್ಲಿಯೇ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆ ಕಂಡಿತ್ತು.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 657.39 ಅಂಕ ಏರಿಕೆಯಾಗಿದ್ದು, 58,465.97 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 197 ಅಂಕಗಳಷ್ಟು ಏರಿಕೆಯೊಂದಿಗೆ 17,463.80 ಅಂಕಗಳ ಮಟ್ಟ ತಲುಪಿದೆ.
ಕೋಲ್ ಇಂಡಿಯಾ, ಮಾರುತಿ ಸುಜುಕಿ, ಹಿಂಡಾಲ್ಕೋ, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಆಟೋ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಒಎನ್ ಜಿಸಿ, ಸನ್ ಫಾರ್ಮಾ, ಬಿಪಿಸಿಎಲ್, ಐಟಿಸಿ ಮತ್ತು ಎಸ್ ಬಿಐ ಲೈಫ್ ಇನ್ಸೂರೆನ್ಸ್ ಷೇರುಗಳು ನಷ್ಟ ಕಂಡಿದೆ.