ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ (ಆಗಸ್ಟ್ 09) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 450ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 465.14 ಅಂಕಗಳಷ್ಟು ಏರಿಕೆಯಾಗಿದ್ದು, 58,853.07 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 126.60 ಅಂಕಗಳಷ್ಟು ಏರಿಕೆಯೊಂದಿಗೆ 17,525.10 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಏರಿಕೆಯಿಂದ ಮಹೀಂದ್ರ ಆ್ಯಂಡ್ ಮಹೀಂದ್ರ, ಕೋಲ್ ಇಂಡಿಯಾ, ಬಜಾಜ್ ಫಿನ್ ಸರ್ವ್, ಹಿಂಡಲ್ಕೋ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫಸ್ ಸಿ ಬ್ಯಾಂಕ್ ಷೇರುಗಳು ಲಾಭ ಗಳಿಸಿದೆ.
ಮತ್ತೊಂದೆಡೆ ಬಿಪಿಸಿಎಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಆಲ್ಟ್ರಾ ಟೆಕ್ ಸಿಮೆಂಟ್, ಬ್ರಿಟಾನಿಯಾ ಇಂಡಸ್ಟ್ರೀಸ್ ಮತ್ತು ನೆಸ್ಲೆ ಇಂಡಿಯಾ ಷೇರುಗಳು ನಷ್ಟ ಕಂಡಿದೆ. ಇನ್ನುಳಿದಂತೆ ಆಟೋ, ಕ್ಯಾಪಿಟಲ್ ಗೂಡ್ಸ್, ಮೆಟಲ್ ಸೆಕ್ಟರ್ ನ ಷೇರುಗಳು ಬೆಲೆಯೂ ಶೇ.2ರಷ್ಟು ಲಾಭಗಳಿಸಿದೆ.