Advertisement

ವಾರಾಂತ್ಯದಲ್ಲಿ ಪುಟಿದೆದ್ದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, 18,000ಗಡಿ ದಾಟಿದ ನಿಫ್ಟಿ

04:36 PM Nov 12, 2021 | |

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಶುಕ್ರವಾರ(ನವೆಂಬರ್ 12) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 767.00 ಅಂಕಗಳಷ್ಟು ಏರಿಕೆಯಾಗಿದ್ದು, ಹೂಡಿಕೆದಾರರಿಗೆ ಲಾಭವಾದಂತಾಗಿದೆ.

Advertisement

ಇದನ್ನೂ ಓದಿ:ಚೀನಾದ ಹಲವೆಡೆ ಲಾಕ್ ಡೌನ್, ಜರ್ಮನಿಯಲ್ಲಿ 24ಗಂಟೆಗಳಲ್ಲಿ 50,000 ಕೋವಿಡ್ ಪ್ರಕರಣ ಪತ್ತೆ

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 767.00 ಅಂಕಗಳಷ್ಟು ಏರಿಕೆ ಕಂಡಿದ್ದು, 60,686.69 ಅಂಕಗಳಲ್ಲಿ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 229.20 ಅಂಕಗಳಷ್ಟು ಏರಿಕೆಯೊಂದಿಗೆ 18,102.80ರ ಗಡಿ ದಾಟಿದೆ.

ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟೆಕ್ ಮಹೀಂದ್ರ, ಹಿಂಡಲ್ಕೋ ಇಂಡಸ್ಟ್ರೀಸ್, ವಿಪ್ರೋ, ಎಚ್ ಡಿಎಫ್ ಸಿ ಮತ್ತು ಇನ್ಫೋಸಿಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಬಜಾಜ್ ಆಟೋ, ಟಾಟಾ ಸ್ಟೀಲ್, ಹೀರೋ ಮೋಟಾರ್ , ಆಕ್ಸಿಸ್ ಬ್ಯಾಂಕ್ ಮತ್ತು ಐಒಸಿ ಷೇರುಗಳು ನಷ್ಟ ಕಂಡಿದೆ.

ಶುಕ್ರವಾರ ಬೆಳಗ್ಗೆ ಆರಂಭಿಕ ವಹಿವಾಟಿನಲ್ಲಿ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 400.87 ಅಂಕಗಳಷ್ಟು ಏರಿಕೆಯಾಗಿದ್ದು, 60,320.56 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 120.10 ಅಂಕಗಳಷ್ಟು ಏರಿಕೆಯೊಂದಿಗೆ 17,993.70 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next