ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮದ ನಡುವೆಯೂ ಬುಧವಾರ(ಅ.13) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ ನಾಗಾಲೋಟ ಮುಂದುವರಿದಿದ್ದು, 452 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಭಗವತಿ ಅಮ್ಮನ ದೇವಸ್ಥಾನ; ನವರಾತ್ರಿಯಲ್ಲಿ ಮುಸ್ಲಿಂ ಕುಟುಂಬದಿಂದ ಮೊದಲ ಪೂಜೆ!
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 452.74 ಅಂಕಗಳ ಏರಿಕೆಯೊಂದಿಗೆ 60,737.05 ಅಂಕಗಳ ಸಾರ್ವಕಾಲಿಕ ಗರಿಷ್ಠ ದಾಖಲೆಯ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 169.80 ಅಂಕ ಏರಿಕೆಯಾಗಿದ್ದು, 18,161.80 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟಾಟಾ ಮೋಟಾರ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಪವರ್ ಗ್ರಿಡ್ ಹಾಗೂ ಐಟಿಸಿ ಷೇರುಗಳು ಲಾಭಗಳಿಸಿದೆ. ಮಾರುತಿ ಸುಜುಕಿ, ಒಎನ್ ಜಿಸಿ, ಕೋಲ್ ಇಂಡಿಯಾ, ಎಸ್ ಬಿಐ ಲೈಫ್ ಇನ್ಸೂರೆನ್ಸ್ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಕಂಡಿದೆ.
ಇಂದು ಬೆಳಗ್ಗೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 60,621.72 ಅಂಕಗಳಷ್ಟು ದಾಖಲೆ ಪ್ರಮಾಣದ ಏರಿಕೆಯ ವಹಿವಾಟು ನಡೆಸಿತ್ತು. ಅದೇ ರೀತಿ ಮಧ್ಯಂತರ ವಹಿವಾಟಿನಲ್ಲಿ ಎನ್ ಎಸ್ ಇ ನಿಫ್ಟಿ 97.75 ಅಂಕಗಳಷ್ಟು ಏರಿಕೆಯಾಗಿದ್ದು, 18,089.70 ಅಂಕಗಳ ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿತ್ತು.