ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಗುರುವಾರ (ಜುಲೈ 14) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 98 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಅವಧಿಗೆ ಮುನ್ನವೇ ತುಂಬಿದ ಭದ್ರಾ ಜಲಾಶಯ, 12 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ
ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 98 ಅಂಕಗಳಷ್ಟು ಇಳಿಕೆಯಾಗಿದ್ದು, 53,416.15 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 53,861.28ಕ್ಕೆ ಏರಿಕೆ ಕಂಡಿದ್ದು, ಮಧ್ಯಂತರದಲ್ಲಿ 53,163.77 ಅಂಕಗಳಲ್ಲಿ ವಹಿವಾಟು ಕುಸಿದಿತ್ತು.
ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ ಆರಂಭಿಕವಾಗಿ ಏರಿಕೆ ಕಂಡಿದ್ದು, ನಂತರದಲ್ಲಿ ಅಲ್ಪ ಪ್ರಮಾಣದ 28 ಅಂಕಗಳಷ್ಟು ಇಳಿಕೆಯಾಗಿದ್ದು, 15,938.65 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಅಲ್ಪ ಪ್ರಮಾಣದ ಕುಸಿತದ ಪರಿಣಾಮ ಆ್ಯಕ್ಸಿಸ್ ಬ್ಯಾಂಕ್, ಎಚ್ ಸಿಎಲ್ ಟೆಕ್ನಾಲಜೀಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಟೆಕ್ ಮಹೀಂದ್ರ, ಟಿಸಿಎಸ್, ವಿಪ್ರೋ, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಐಟಿಸಿ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಸನ್ ಫಾರ್ಮಾ, ಡಾ.ರೆಡ್ಡೀಸ್ ಲ್ಯಾಬ್, ಮಾರುತಿ ಸುಜುಕಿ ಇಂಡಿಯಾ, ಕೋಟಕ್ ಮಹೀಂದ್ರ ಬ್ಯಾಂಕ್, ಟೈಟಾನ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ ಎಂದು ಮಾರುಕಟ್ಟೆ ವರದಿ ತಿಳಿಸಿದೆ.