ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯ ದುರ್ಬಲ ವಹಿವಾಟಿನ ಪರಿಣಾಮ ಶುಕ್ರವಾರ(ಡಿಸೆಂಬರ್ 17) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಭಾರೀ ಪ್ರಮಾಣದಲ್ಲಿ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಇದರೊಂದಿಗೆ ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟವಾದಂತಾಗಿದೆ.
ಇದನ್ನೂ ಓದಿ:ಬಿಜೆಪಿ ಉತ್ತರಪ್ರದೇಶವನ್ನು ರೈತರ ಆತ್ಮಹತ್ಯೆ ಪ್ರಕರಣದಲ್ಲಿ ನಂ.1 ಮಾಡಲು ಹೊರಟಿದೆ: ಯಾದವ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 889.40 ಅಂಕಗಳಷ್ಟು ಇಳಿಕೆಯಾಗಿದ್ದು, 57,011.74 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 263.20 ಅಂಕ ಕುಸಿತದೊಂದಿಗೆ 16,985.20 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಇಂಡಸ್ ಇಂಡ್ ಬ್ಯಾಂಕ್, ಟಾಟಾ ಮೋಟಾರ್ಸ್, ಒಎನ್ ಜಿಸಿ, ಕೋಟಕ್ ಮಹೀಂದ್ರ ಬ್ಯಾಂಕ್ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ವಿಪ್ರೋ, ಇನ್ಫೋಸಿಸ್, ಎಚ್ ಸಿಎಲ್ ಟೆಕ್ನಾಲಜೀಸ್, ಪವರ್ ಗ್ರಿಡ್ ಕಾರ್ಪೋರೇಶನ್, ಸನ್ ಫಾರ್ಮಾ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 319.82 ಅಂಕ ಇಳಿಕೆಯೊಂದಿಗೆ 57,581.32 ಅಂಕಗಳಲ್ಲಿ ಆರಂಭಿಕ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 91 ಅಂಕ ಇಳಿಕೆಯಾಗಿದ್ದು, 17,157.40 ಅಂಕಗಳ ಮಟ್ಟ ತಲುಪಿತ್ತು.