ಮುಂಬಯಿ: ರಷ್ಯಾ, ಉಕ್ರೇನ್ ಯುದ್ಧದ ಪರಿಣಾಮ ಮತ್ತೆ ಸೋಮವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 304.48 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಗೆಳೆಯರೊಂದಿಗೆ ಗೋವಾ ಪ್ರವಾಸಕ್ಕೆ ಬಂದ ಮಹಾರಾಷ್ಟ್ರದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 304.48 ಅಂಕ ಕುಸಿತ ಕಂಡಿದ್ದು, 57,684.82 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 69.80 ಅಂಕ ಇಳಿಕೆಯಾಗಿದ್ದು, 17,245.70 ಅಂಕಗಳ ಮಟ್ಟಕ್ಕಿಳಿದಿದೆ.
ಕೋಟಕ್ ಮಹೀಂದ್ರ ಬ್ಯಾಂಕ್, ಎಚ್ ಡಿಎಫ್ ಸಿ, ಬ್ರಿಟಾನಿಯಾ ಇಂಡಸ್ಟ್ರೀಸ್, ಭಾರ್ತಿ ಏರ್ ಟೆಲ್ ಮತ್ತು ಸಿಪ್ಲಾ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಹಿಂಡಲ್ಕೋ ಇಂಡಸ್ಟ್ರೀಸ್, ಡೀವಿಸ್ ಲ್ಯಾಬ್ಸ್, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್, ಟಾಟಾ ಸ್ಟೀಲ್ ಮತ್ತು ಯುಪಿಎಲ್ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427.26 ಅಂಕಗಳಷ್ಟು ಏರಿಕೆಯೊಂದಿಗೆ 58,416.56 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 126.9 ಅಂಕ ಏರಿಕೆಯಾಗಿದ್ದು, 17,442.40 ಅಂಕಗಳ ಮಟ್ಟದಲ್ಲಿ ವಹಿವಾಟು ನಡೆದಿತ್ತು.