ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಬುಧವಾರವೂ(ಡಿಸೆಂಬರ್ 15) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:2017ರಿಂದ ಪ್ರತಿವರ್ಷ ಜಮ್ಮು-ಕಾಶ್ಮೀರದಲ್ಲಿ 30ರಿಂದ 40 ನಾಗರಿಕರ ಹತ್ಯೆ: ಸರ್ಕಾರ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 329.06 ಅಂಕಗಳಷ್ಟು ಇಳಿಕೆಯೊಂದಿಗೆ 57,788.03 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 103.50 ಅಂಕ ಕುಸಿತಗೊಂಡಿದ್ದು, 17,221.40 ಅಂಕದೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ.
ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಅದಾನಿ ಪೋರ್ಟ್ಸ್, ಐಟಿಸಿ ಮತ್ತು ಒಎನ್ ಜಿಸಿ ಷೇರುಗಳು ನಷ್ಟ ಕಂಡಿದೆ. ಸನ್ ಫಾರ್ಮಾ, ಕೋಟಕ್ ಮಹೀಂದ್ರ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಹೀರೋ ಮೋಟಾರ್ ಕಾರ್ಪೋರೇಶನ್ ಹಾಗೂ ಮಾರುತಿ ಸುಜುಕಿ ಷೇರುಗಳು ಲಾಭಗಳಿಸಿದೆ.
ಮಂಗಳವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 166.33 ಅಂಕ ಕುಸಿತಗೊಂಡಿದ್ದು, 58,117.09 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 43.40ಅಂಕ ಇಳಿಕೆಯೊಂದಿಗೆ 17,324.90 ಅಂಕದೊಂದಿಗೆ ವಹಿವಾಟು ಅಂತ್ಯಗೊಂಡಿತ್ತು.