ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಪಾಸಿಟಿವ್ ಟ್ರೆಂಡ್ ಹಿನ್ನೆಲೆಯಲ್ಲಿ ಸೋಮವಾರ (ಡಿಸೆಂಬರ್ 13) ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಏರಿಕೆ ಕಂಡಿದ್ದು, ದಿನಾಂತ್ಯಕ್ಕೆ 503 ಅಂಕಗಳಷ್ಟು ಇಳಿಕೆ ಮೂಲಕ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ : ಪಿಎಸ್‌ಐ ಸೇರಿ ಐವರು ಪೊಲೀಸರ ಅಮಾನತು
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 503.25 ಅಂಕ ಇಳಿಕೆಯಾಗಿದ್ದು, 58,283.42 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 143 ಅಂಕ ಕುಸಿತಗೊಂಡಿದ್ದು, 17, 368.60 ಅಂಕಗಳ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ.
ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಮಹೀಂದ್ರ ಆ್ಯಂಡ್ ಮಹೀಂದ್ರ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಟೆಕ್ ಮಹೀಂದ್ರ, ಆ್ಯಕ್ಸಿಸ್ ಬ್ಯಾಂಕ್, ಮಾರುತಿ ಸುಜುಕಿ, ವಿಪ್ರೋ ಮತ್ತು ಎಸ್ ಬಿಐ ಲೈಫ್ ಇನ್ಸೂರೆನ್ಸ್ ಷೇರುಗಳು ಲಾಭಗಳಿಸಿದೆ.
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 375.30 ಅಂಕಗಳಷ್ಟು ಏರಿಕೆಯೊಂದಿಗೆ 59,161.97 ಅಂಕಗಳಲ್ಲಿ ವಹಿವಾಟು ನಡೆಸಿದತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 94.75 ಅಂಕ ಏರಿಕೆಯಾಗಿದ್ದು, 17, 606.05 ಅಂಕಗಳ ಮಟ್ಟ ತಲುಪಿತ್ತು.