ಮುಂಬಯಿ:ಸತತ ಮೂರು ದಿನಗಳಿಂದ ಷೇರುಪೇಟೆಯ ಸೆನ್ಸೆಕ್ಸ್ ಇಳಿಕೆಯಾಗುತ್ತಿದ್ದು, ಹೂಡಿಕೆದಾರರು ಲಾಭಾಂಶವನ್ನು ಕಾಯ್ದಿರಿಸುವುದನ್ನು ಮುಂದುವರಿಸಿರುವ ಪರಿಣಾಮ ಗುರುವಾರ (ಜನವರಿ) ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 600ಕ್ಕೂ ಅಧಿಕ ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ಮನೆಗಳಿಗೆ ಔಷಧಿ ವಿತರಿಸಲು ಸೂಚನೆ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 634.20 ಅಂಕಗಳಷ್ಟು ಕುಸಿತ ಕಂಡಿದ್ದು, 59,464.62 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 181.40 ಅಂಕ ಇಳಿಕೆಯಾಗಿದ್ದು, 17,757 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.
ಬಜಾಜ್ ಫಿನ್ ಸರ್ವ್, ಇನ್ಫೋಸಿಸ್, ಟಿಸಿಎಸ್, ಡಿವೀಸ್ ಲ್ಯಾಬ್, ಬಜಾಜ್ ಆಟೋ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಪವರ್ ಗ್ರಿಡ್ ಕಾರ್ಪೋರೇಶನ್, ಭಾರ್ತಿ ಏರ್ ಟೆಲ್, ಗ್ರಾಸಿಮ್ ಇಂಡಸ್ಟ್ರೀಸ್, ಜೆಎಸ್ ಡಬ್ಲ್ಯು ಸ್ಟೀಲ್ ಮತ್ತು ಬ್ರಿಟಾನಿಯಾ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 600 ಅಂಕಗಳಷ್ಟು ಇಳಿಕೆಯಾಗಿದ್ದು, 59,488.74 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು. ಕಳೆದ 3 ದಿನಗಳಲ್ಲಿ ಸೆನ್ಸೆಕ್ಸ್ 1,600 ಅಂಕಗಳಷ್ಟು ಕುಸಿತ ಕಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 103 ಅಂಕಗಳಷ್ಟು ಕುಸಿತವಾಗಿದ್ದು, 17,834 ಅಂಕಗಳಿಗೆ ಕುಸಿದಿತ್ತು.