ಮುಂಬಯಿ: ಎರಡನೇ ಅವಧಿಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಬುಧವಾರ(ನವೆಂಬರ್ 15) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 314 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.
ಇದನ್ನೂ ಓದಿ:ಅನ್ಯ ಜಾತಿ ವ್ಯಕ್ತಿ ಜತೆ ವಿವಾಹ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ಕೊಲೆ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 314.04 ಅಂಕ ಕುಸಿತವಾಗಿದ್ದು, 60,008.33 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟನ್ನು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 100.50 ಅಂಕ ಇಳಿಕೆಯಾಗಿದ್ದು, 17,898.70 ಅಂಕಗಳ ಗಡಿಯಲ್ಲಿದೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದ ಯುಪಿಎಲ್, ರಿಲಯನ್ಸ್ ಇಂಡಸ್ಟ್ರೀಸ್, ಆ್ಯಕ್ಸಿಸ್ ಬ್ಯಾಂಕ್, ಬ್ರಿಟಾನಿಯಾ ಇಂಡಸ್ಟ್ರೀಸ್ ಮತ್ತು ಐಒಸಿ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಎಸ್ ಬಿಐ ಲೈಫ್ ಇನ್ಸೂರೆನ್ಸ್, ಏಷ್ಯನ್ ಪೇಂಟ್ಸ್, ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ.
ಅತಿಯಾದ ಲಾಭದ ಹಿನ್ನೆಲೆಯಲ್ಲಿ ಹೂಡಿಕೆದಾರರು ಷೇರುಪೇಟೆಯಲ್ಲಿ ತಮ್ಮ ಷೇರುಗಳ ಮಾರಾಟದಲ್ಲಿ ತೊಡಗಿದ ಪರಿಣಾಮ ಸೆನ್ಸೆಕ್ಸ್ ಇಳಿಕೆಗೆ ಕಾರಣವಾಗಿದೆ. ಆರಂಭದಲ್ಲಿ ಷೇರುಪೇಟೆಯ ವಹಿವಾಟು ಚೇತರಿಕೆ ಕಂಡಿದ್ದರು, ಕೂಡಾ ದಿನಾಂತ್ಯಕ್ಕೆ ಇಳಿಕೆಯೊಂದಿಗೆ ವಹಿವಾಟು ಕೊನೆಗೊಂಡಿದೆ.