ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ತೋರಿದ ಪ್ರಬಲ ಖರೀದಿ ಆಸಕ್ತಿಯ ಫಲವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 187 ಅಂಕಗಳ ಜಿಗಿತವನ್ನು ಸಾಧಿಸಿತು.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 66 ಅಂಕಗಳ ಮುನ್ನಡೆಯನ್ನು ದಾಖಲಿಸಿ 10,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್ ಸಂಪಾದಿಸಿತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 171.10 ಅಂಕಗಳ ಮುನ್ನಡೆಯೊಂದಿಗೆ 31,858.62 ಅಂಕಗಳ ಮಟ್ಟದಲ್ಲೂ, ನಿಫ್ಟಿ 52.40 ಅಂಕಗಳ ಮುನ್ನಡೆಯೊಂದಿಗೆ 9,987.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಬ್ಯಾಂಕ್ ನಿಫ್ಟಿ 116.50 ಅಂಕಗಳ ಮುನ್ನಡೆಯನ್ನು ಸಾಧಿಸಿದರೆ ಐಟಿ ನಿಫ್ಟಿ 27.50 ಅಂಕಗಳ ಮುನ್ನಡೆಯನ್ನು ದಾಖಲಿಸಿತು.
ಲಾರ್ಸನ್, ಗೇಲ್, ರಿಲಯನ್ಸ್, ಇನ್‌ಫೋಸಿಸ್ ಮತ್ತು ಎಚ್ ಡಿ ಎಫ್ ಸಿ ಬ್ಯಾಂಕ್ ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದವು.
ಮಧ್ಯಮ ಹಾಗೂ ದೊಡ್ಡ ಗಾತ್ರದ ಕಾರುಗಳ ಮೇಲಿನ ಸುಂಕವು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿದ್ದುದುರ ಫಲವಾಗಿ ಆಟೋ ಶೇರುಗಳು ಶೆ.1ರಷ್ಟು ಜಿಗಿದಿರುವುದು ಇಂದಿನ ವಿಶೇಷ.