Advertisement

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಾಪಸ್ ಪಡೆದ ರಾಜ್ಯ ಸರ್ಕಾರ

11:58 PM Jul 11, 2022 | Team Udayavani |

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ ಹಾಗೂ ಮಂಡಳಿಗಳ ಆಧ್ಯಕ್ಷರ ನೇಮಕಾತಿಯ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

Advertisement

ಸುಮಾರು 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಆದೇಶವನ್ನು ವಾಪಸ್ ಪಡೆದಿದ್ದು, ಇನ್ನೆರಡು ದಿನದಲ್ಲಿ ಹೊಸ ಅಧ್ಯಕ್ಷರ ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಸೋಮವಾರ ಸುಮಾರು ಮೂರು ಗಂಟೆಗಳ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವರಾದ. ಆರ್ ಅಶೋಕ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರು ಗೌಪ್ಯ ಸ್ಥಳದಲ್ಲಿ ಸಭೆ ನಡೆಸಿ, ಒಂದೂವರೆ ವರ್ಷ ಪೂರೈಸಿರುವ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಆದೇಶವನ್ನು ವಾಪಸ್ ಪಡೆದು ಹೊಸ ಅಧ್ಯಕ್ಷರ ನೇಮಕ ಮಾಡುವ ಕುರಿತು ಸುದೀರ್ಘ ಚರ್ಚೆ ನಡೆಸಿದ್ದರು ಎಂದು ತಿಳಿದು ಬಂದಿದೆ.

ನಿಗಮ ಮಂಡಳಿ ಅಧ್ಯಕ್ಷರಾಗಿರು ಪಕ್ಷದ ಶಾಸಕರು ಹಾಗೂ ಮಾಜಿ ಶಾಸಕರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.

ಖಾಲಿಯಾಗುವ ನಿಗಮ ಮಂಡಳಿ ಅಧ್ಯಕ್ಷರ ಸ್ಥಾನಗಳಿಗೆ ಇನ್ನೆರಡು ದಿನದಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಿ, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಆದಷ್ಟು ಬೇಗ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next