Advertisement
ರಾತ್ರಿ ಕರ್ಫ್ಯೂ ಜಾರಿ ತೀರ್ಮಾನ ಮುಖ್ಯಮಂತ್ರಿ ಯಡಿಯೂರಪ್ಪ ಅವರದಲ್ಲ. ಸಚಿವ ಸುಧಾಕರ್ ಅವರದಾಗಿತ್ತು. ಅವರಿಗೇನಾದರೂ ಪರಿಜ್ಞಾನ ಇದೆಯೇ ಎಂದು ಡಿ. ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
Related Articles
Advertisement
ಪ್ರಚಾರ ಸಿಗುತ್ತದೆಂದು ಅವರಿಗೆ ಇಷ್ಟಬಂದಂತೆ ತೀರ್ಮಾನ ಮಾಡಿದರೆ ಕೇಳಲು ಸಾಧ್ಯವೇ? ಈ ಸರಕಾರ ಬಂದ ಮೇಲೆ ಎಷ್ಟು ನಿರ್ಧಾರಗಳಲ್ಲಿ ಯೂ ಟರ್ನ್ ಹೊಡೆದಿದೆ ಎಂದು ಲೆಕ್ಕ ಹಾಕಿ ಎಂದರು.
ಸುಧಾಕರ್ ತಿರುಗೇಟುಇದಕ್ಕೆ ಪ್ರತಿಕ್ರಿಯಿಸಿದ ಡಾ| ಸುಧಾಕರ್, ನೈಟ್ ಕರ್ಫ್ಯೂ ನಿರ್ಧಾರ ವನ್ನು ಬಹಳ ವಿವೇಚನೆ ಯಿಂದಲೇ ಕೈಗೊಳ್ಳಲಾಗಿತ್ತು. ಅದೇನೂ ರಾಜಕೀಯ ನಿರ್ಧಾರ ಅಲ್ಲ. ನಮ್ಮ ಸರಕಾರ ಉತ್ತಮವಾದ ನಿರ್ಧಾರಗಳಿಂದ ಕೊರೊನಾವನ್ನು ನಿಯಂತ್ರಿಸಿದೆ. ಸರಕಾರದ ಕ್ರಮಗಳಿಂ ದಾಗಿ ಸೋಂಕಿಗೊಳಗಾದವರಲ್ಲಿ ಶೇ. 97.5ರಷ್ಟು ಮಂದಿ ಗುಣಮುಖ ರಾಗಿದ್ದಾರೆ. ಸಾವಿನ ಪ್ರಮಾಣ ಶೇ.1.22ಕ್ಕೆ ಇಳಿದಿದೆ ಎಂದರು. ಬ್ರಿಟನ್‌ನಲ್ಲಿ ಲಾಕ್‌ಡೌನ್ ಆಗಿದೆ, ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಹಾಗೆಂದು ಅಲ್ಲಿ ಇರುವವರಿಗೆ ಬುದ್ಧಿ ಇಲ್ಲ ಎಂದರ್ಥವಲ್ಲ. ಪ್ರತಿಯೊಂದು ತೀರ್ಮಾನವನ್ನೂ ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದವರ ಜತೆ ಕೂಲಂಕಷವಾಗಿ ಚರ್ಚಿಸಿ ತೆಗೆದುಕೊಳ್ಳಲಾಗಿದೆ ಎಂದರು. ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರಲ್ಲಿ 10 ಜನರಿಗೆ ಕೊರೊನಾ ಪಾಟಿಸಿವ್ ಆಗಿದೆ ಎಂದು ತಿಳಿದುಬಂದಿದ್ದು, ಹತ್ತು ಜನರ ಮಾದರಿಯನ್ನು ನಿಮ್ಹಾ ನ್ಸ್‌ಗೆ ಕಳುಹಿಸಲಾಗಿದೆ. ಜೆನೆಟಿಕ್ ಸೀಕ್ವೆನ್ಸ್ ಮಾಡಲು 2-3 ದಿನ ಬೇಕಾಗಿದೆ. ಒಂದು ವೇಳೆ ಅವರಲ್ಲಿ ಹೊಸ ಪ್ರಭೇದದ ವೈರಸ್ ಖಚಿತವಾದರೆ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.
– ಡಾ| ಕೆ. ಸುಧಾಕರ್ ಆರೋಗ್ಯ ಸಚಿವರು