ಕಲಬುರಗಿ: ಕೋವಿಡ್ ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಮಂಜಾಗೃತ ವಾಗಿ ನಗರಾದ್ಯಂತ ಮಂಗಳವಾರದಿಂದ ಜನವರಿ 7ರ ವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಸಿಆರ್‌ಪಿಸಿ ಕಾಯ್ದೆ 1973ರ ಕಲಂ 144ರ ಅನ್ವಯ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ| ವೈ.ಎಸ್. ರವಿಕುಮಾರ ಆದೇಶ ಹೊರಡಿಸಿದ್ದಾರೆ.
ರಾತ್ರಿ ಕರ್ಫ್ಯೂ ಅವ ಧಿಯಲ್ಲಿ ಪ್ರತಿನಿತ್ಯ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಸಂಚಾರ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇ ಧಿಸಲಾಗಿದೆ. ಆದರೆ, ಔಷಧಾಲಯಗಳು ಸೇರಿ ದಂತೆ ವೈದ್ಯಕೀಯ, ತುರ್ತು ಹಾಗೂ ಅಗತ್ಯ ಸೇವೆಗಳು ಸಂಪೂರ್ಣ ಕಾರ್ಯನಿರ್ವಹಿಸುತ್ತವೆ. ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿ ಸಲಾಗಿದೆ. ಲಾರಿಗಳು, ಸರಕು ವಾಹನಗಳು ಹಾಗೂ ಖಾಲಿ ವಾಹನಗಳು ಸೇರಿದಂತೆ ಎಲ್ಲ ರೀತಿಯ ಸರಕುಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಹೇಳಿದ್ದಾರೆ.
ತುರ್ತು ಅಗತ್ಯವಿರುವ ರೋಗಿಗಳು ಮತ್ತು ಅವರ ಪಾಲಕರ ಸಂಚಾರಕ್ಕೆ ಅನುಮತಿಸಲಾಗಿದೆ. ರಾತ್ರಿಯಲ್ಲಿ ಕಾರ್ಯಾಚರಣೆಗೆ ಅಗತ್ಯವಿರುವ ಕೈಗಾರಿಕೆಗಳು, ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು, ಅಂತಹ ಸಂಸ್ಥೆಗಳ ನೌಕರರು ಆಯಾ ಸಂಸ್ಥೆ ನೀಡುವ ಗುರುತಿನಚೀಟಿ ಪ್ರದರ್ಶಿಸಿದಲ್ಲಿ ಅನುಮತಿಸಲಾಗುತ್ತದೆ. ಟೆಲಿಕಾಂ, ಅಂತರ್ಜಾಲ ಸೇವಾ ಪೂರೈಕೆದಾರರ ನೌಕರರು ಮತ್ತು ವಾಹನಗಳು ಆಯಾ ಸಂಸ್ಥೆ ನೀಡುವ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಾಮಗ್ರಿಗಳನ್ನು ಮನೆಗೆ ತಲುಪಿಸಲು ಹಾಗೂ ಇ-ಕಾಮರ್ಸ್ ಕಂಪನಿಗಳ ಕಾರ್ಯಾಚರಣೆಗೆ ಅನುಮತಿಸಲಾಗಿದೆ. ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಈ ಸಂದರ್ಭದಲ್ಲಿ ಪ್ರಯಾಣಿಕರು ಪ್ರಯಾಣದ ಟಿಕೇಟ್ ನ್ನು ತೋರಿಸಿ ವಿಮಾನ ನಿಲ್ದಾಣಗಳಿಗೆ, ರೈಲು ನಿಲ್ದಾಣಗಳಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ 4 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇ ಧಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.