Advertisement

ರಾತ್ರಿ ಕರ್ಫ್ಯೂ: ವಿವರ ಕೇಳಿದ ಹೈಕೋರ್ಟ್‌

07:20 AM Jun 11, 2020 | Lakshmi GovindaRaj |

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ಮಾರ್ಗಸೂಚಿಗಳ ಪ್ರಕಾರ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಕೈಗೊಂಡಿರುವ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಈ ಕುರಿತು ಬೆಂಗಳೂರಿನ ಲೆಟ್ಜ್ ಕಿಟ್‌  ಫೌಂಡೇಷನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಇ.ಎಸ್‌. ಇಂದಿರೇಶ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.

Advertisement

ಅರ್ಜಿ  ವಿಚಾರಣೆ ವೇಳೆ ವಾದ ಆಲಿಸಿದ ನ್ಯಾಯಪೀಠ, ಲಾಕ್‌ಡೌನ್‌ ಸಡಿಲಿಕೆ ಮಾರ್ಗಸೂಚಿಗಳ ಪ್ರಕಾರ ರಾತ್ರಿ ಕರ್ಫ್ಯೂ ಜಾರಿಗೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾರ್ಗಸೂಚಿ ಉಲ್ಲಂ ಸಿದರೆ ಆ ಬಗ್ಗೆ ದೂರು ದಾಖಲಿಸಲು ಯಾವ  ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಜೂ.12ಕ್ಕೆ ಮುಂದೂಡಿತು. ಹೈಕೋರ್ಟ್‌ ಬೇಸರ: ಇದೇ ವೇಳೆ ಲಾಕ್‌ಡೌನ್‌ ಸಡಿಲಿಕೆ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಜನರ ಓಡಾಟ ಹೆಚ್ಚಾಗಿದೆ.

ಬಹಳಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿತು. ಇದೀಗ ಮಾಲ್, ಪೂಜಾ ಸ್ಥಳಗಳು, ಧಾರ್ಮಿಕ ಕೇಂದ್ರಗಳು, ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳು  ಪುನಾರಂಭಗೊಂಡಿರುವುದರಿಂದ ಅಂತಹ ಕಡೆ ಮಾರ್ಗಸೂಚಿಗಳ ಪಾಲನೆಗೆ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠ ಸರ್ಕಾರವನ್ನು ಕೇಳಿತು.

Advertisement

Udayavani is now on Telegram. Click here to join our channel and stay updated with the latest news.

Next