Advertisement

ಉತ್ತರಪ್ರದೇಶ: ನೋಯ್ಡಾ, ಲಕ್ನೋದಲ್ಲಿ ರಾತ್ರಿ ಕರ್ಫ್ಯೂ ಅವಧಿ ವಿಸ್ತರಣೆ, ಪರೀಕ್ಷೆ ಮುಂದೂಡಿಕೆ

03:00 PM Apr 15, 2021 | Team Udayavani |

ಲಕ್ನೋ: ಕೋವಿಡ್ 19 ಸೋಂಕು ಪ್ರಕರಣ ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ನಿಟ್ಟಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಇನ್ನಷ್ಟು ಕಠಿಣಗೊಳಿಸಲು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

Advertisement

ನೋಯ್ಡಾ ಮತ್ತು ಲಕ್ನೋ ನಗರಗಳಲ್ಲಿ ರಾತ್ರಿ ಕರ್ಫ್ಯೂ ಅವಧಿಯನ್ನು ವಿಸ್ತರಿಸಲು ಆದೇಶ ನೀಡಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಶಾಲೆಗಳನ್ನು ಮೇ 15ರವರೆಗೆ ಬಂದ್ ಮಾಡಲು ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.

ರಾಜಧಾನಿ ಲಕ್ನೋ ಸೇರಿದಂತೆ ಪ್ರಯಾಗ್ ರಾಜ್, ನೋಯ್ಡಾ, ಕಾನ್ಪುರ್, ವಾರಣಾಸಿ, ಮೀರತ್ ಮತ್ತು ಗಾಜಿಯಾಬಾದ್ ಗಳಲ್ಲಿ ಈಗಾಗಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು, ಇಂದಿನಿಂದ ರಾತ್ರಿ 8ರಿಂದ ಬೆಳಗ್ಗೆ 7ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ತಿಳಿಸಿದೆ. ಇದಕ್ಕೂ ಮುನ್ನ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು.

ಈ ಎಲ್ಲಾ ಜಿಲ್ಲೆಗಳಲ್ಲಿ ಸರಾಸರಿ 2 ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕಠಿಣ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next