ಲಕ್ನೋ: ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉತ್ತರಪ್ರದೇಶ ಸರ್ಕಾರ ರಾತ್ರಿ ಕರ್ಫ್ಯೂ ಘೋಷಿಸಿದೆ. ರಾತ್ರಿ 11ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ಶನಿವಾರ (ಡಿಸೆಂಬರ್ 25) ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಉತ್ತರಪ್ರದೇಶ: ಐಟಿ ದಾಳಿ-ಈ ಉದ್ಯಮಿ ಮನೆಯಲ್ಲಿ ಸಿಕ್ಕ ಹಣ ಎಣಿಸಲು 3 ಯಂತ್ರ ಬಳಕೆ!
ವಿವಾಹ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೇವಲ 200 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ನಿರ್ಬಂಧ ವಿಧಿಸಿದೆ. ವಿವಾಹ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮ ಅನುಸರಿಸುವುದು ಕಡ್ಡಾಯ ಎಂದು ಹೇಳಿದೆ.
ಮಧ್ಯಪ್ರದೇಶ ಸರ್ಕಾರ ಈಗಾಗಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು, ಇದೀಗ ಉತ್ತರ ಪ್ರದೇಶ ಸರ್ಕಾರ ಕೂಡಾ ರಾತ್ರಿ ಕರ್ಫ್ಯೂ ಹೇರಿದೆ. ಮಧ್ಯಪ್ರದೇಶದಲ್ಲಿಯೂ ರಾತ್ರಿ 11ರಿಂದ ಮುಂಜಾನೆ 5ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಘೋಷಿಸಿದ್ದರು.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಅಲಹಾಬಾದ್ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡ ಬೆನ್ನಲ್ಲೇ ಉತ್ತರಪ್ರದೇಶ ಸರ್ಕಾರ ರಾತ್ರಿ ಕರ್ಫ್ಯೂ ಆದೇಶವನ್ನು ಹೊರಡಿಸಿದೆ.