ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ ಮಾಡಲಾಗುವುದು. ಈ ತಿಂಗಳ 20 ರಂದು ಮತ್ತೊಮ್ಮೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಮ್ಮ ನಿವಾಸದಲ್ಲಿಂದು ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಬಳಿಕ ಸಿಎಂ ಬಿಎಸ್ ವೈ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:ರಾಜ್ಯಾದ್ಯಂತ ಸೆ.144; ಶಾಲೆ-ಕಾಲೇಜು, ಚಿತ್ರಮಂದಿರ, ಬಾರ್- ಪಬ್ ಬಂದ್?
ರಾಜ್ಯದ ಪರಿಸ್ಥಿತಿ ಅವಲೋಕನ ಮಾಡಲಾಗಿದೆ. ಈಗ ಇರುವಂತೆ ಏ.20 ರವರೆಗೆ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ. ಸರ್ವಪಕ್ಷ ಸಭೆ, ತಜ್ಞರು, ವೈದ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಎಂದರು.
ಬೇರೆ ಬೇರೆ ರಾಜ್ಯಗಳು ಕೈಗೊಳ್ಳುವ ತೀರ್ಮಾನ, ಪ್ರಧಾನಿಗಳ ಸಲಹೆ ಆಧರಿಸಿ ಮುಂದಿನ ಕ್ರಮ ಕೈಗಳ್ಳಲಾಗುವುದು ಎಂದು ಸಿಎಂ ಹೇಳಿದರು.
ಇದನ್ನೂ ಓದಿ:ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್